ನಟ ದೇವರಾಜ್ ಅವರ ಕಿರಿಯ ಪುತ್ರ ಪ್ರಣಂ ದೇವರಾಜ್ ನಟನೆಯ ‘ಸನ್ ಆಫ್ ಮುತ್ತಣ್ಣ’ ಸಿನಿಮಾ ರಿಲೀಸ್‌ಗೆ ಸಜ್ಜಾಗುತ್ತಿದೆ. ಶ್ರೀಕಾಂತ್ ಹುಣಸೂರು ನಿರ್ದೇಶನದ ಈ ಸಿನಿಮಾಗೆ ಮಲಯಾಳದಿಂದಲೂ ಬೇಡಿಕೆ ಬಂದಿದೆ.
‘ಸು ಫ್ರಮ್ ಸೋ’ ಯಶಸ್ಸಿನ ಬಳಿಕ ಕೇರಳದಲ್ಲಿ ಕನ್ನಡ ಭಾಷೆಯ ಚಿತ್ರಗಳಿಗೆ ಬೇಡಿಕೆ ಹೆಚ್ಚಾಗಿದೆ. ಈ ಕಾರಣದಿಂದ ಆಗಸ್ಟ್ 22ರಂದು ಬಿಡುಗಡೆಯಾಗಬೇಕಿದ್ದ ಈ ಸಿನಿಮಾವನ್ನು ಸೆಪ್ಟೆಂಬರ್ 12ರಂದು ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. ಕನ್ನಡ, ತೆಲುಗು ಹಾಗೂ ಮಲಯಾಳದಲ್ಲಿ ಏಕಕಾಲಕ್ಕೆ ಚಿತ್ರ ಬಿಡುಗಡೆಯಾಗಲಿದೆ.
ಈ ಸಿನಿಮಾದಲ್ಲಿ ಪ್ರಣಂಗೆ ಜೋಡಿಯಾಗಿ ‘ದಿಯಾ’ ಖ್ಯಾತಿಯ ಖುಷಿ ರವಿ ‘ವೈದ್ಯೆ’ಯಾಗಿ ನಟಿಸಿದ್ದಾರೆ. ಈ ಚಿತ್ರ ಅಪ್ಪ-ಮಗನ ಬಾಂಧವ್ಯದ ಕುರಿತಾದ ಕಥಾಹಂದರ ಹೊಂದಿದ್ದು, ರಂಗಾಯಣ ರಘು ಹಾಗೂ ಪ್ರಣಂ ದೇವರಾಜ್ ಅಪ್ಪ–ಮಗನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸುಚೇಂದ್ರ ಪ್ರಸಾದ್, ಗಿರೀಶ್ ಶಿವಣ್ಣ, ತಬಲ ನಾಣಿ, ಶ್ರೀನಿವಾಸ್ ಪ್ರಭು, ಸುಧಾ ಬೆಳವಾಡಿ, ಅರುಣ್ ಚಕ್ರವರ್ತಿ ಮುಂತಾದವರು ತಾರಾಬಳಗದಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.