ADVERTISEMENT

ಎಎಪಿ ಸಂಸದ ರಾಘವ್ ಚೆಡ್ಡಾ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ನಟಿ ಪರಿಣೀತಿ ಚೋಪ್ರಾ

ನವದೆಹಲಿಯಲ್ಲಿ ನಿಶ್ಚಿತಾರ್ಥ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ಮೇ 2023, 15:56 IST
Last Updated 13 ಮೇ 2023, 15:56 IST
   

ಮುಂಬೈ: ಆಮ್‌ ಆದ್ಮಿ ಪಕ್ಷದ ನಾಯಕ ಹಾಗೂ ಸಂಸದ ರಾಘವ್ ಚಡ್ಡಾ ಮತ್ತು ಬಾಲಿವುಡ್ ನಟಿ ಪರಿಣೀತಿ ಚೋಪ್ರಾ ಶನಿವಾರ ನವದೆಹಲಿಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಈ ಕುರಿತು ಇಬ್ಬರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಫೋಟೊಗಳನ್ನು ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಶುಭ ಕೋರಿದ್ದಾರೆ.

ಪರಿಣೀತಿ ಸಂಬಂಧಿಯೂ ಆಗಿರುವ ನಟಿ ಪ್ರಿಯಾಂಕ್ ಚೋಪ್ರಾ ಹಾಗೂ ಗಾಯಕ ನಿಕ್ ಜೋನಾಸ್, ವಸ್ತ್ರವಿನ್ಯಾಸಕ ಮನೀಶ್‌ ಮಲ್ಹೋತ್ರ ಸೇರಿದಂತೆ ಅನೇಕರು ನಿಶ್ಚಿತಾದಲ್ಲಿ ಪಾಲ್ಗೊಂಡಿದ್ದರು.

ADVERTISEMENT

ಮೊದಲ ಬಾರಿಗೆ ಈ ಜೋಡಿ ಲಂಡನ್‌ನಲ್ಲಿ ಕಾಣಿಸಿದ್ದು, ತದನಂತರ ಮುಂಬೈನ ಹೋಟೆಲ್‌ವೊಂದರಲ್ಲಿ ಕ್ಯಾಮರಾ ಕಣ್ಣಿಗೆ ಬಿದ್ದಿದ್ದರು. ಇತ್ತೀಚೆಗೆ ದೆಹಲಿ ಮತ್ತು ಮುಂಬೈನ ಏರ್‌ಪೋರ್ಟ್‌ನಲ್ಲಿಯೂ ಕಾಣಿಸಿಕೊಂಡಿದ್ದರು. ಆ ಮೂಲಕ ಡೇಟಿಂಗ್‌ ನಡೆಸುತ್ತಿದ್ದಾರೆ ಎಂಬ ಅನುಮಾನಕ್ಕೆ ಪುಷ್ಟಿ ನೀಡಿದ್ದರು.

ಇತ್ತೀಚೆಗೆ ಪರಿಣಿತಿ ಚೋಪ್ರಾ ಪ್ರಖ್ಯಾತ ವಸ್ತ್ರವಿನ್ಯಾಸಕ ಮನೀಶ್‌ ಮಲ್ಹೋತ್ರ ಅವರ ಮನೆಗೆ ಭೇಟಿ ನೀಡಿದ್ದರು. ಇದರ ಬೆನ್ನಲ್ಲೇ ಇವರಿಬ್ಬರು ಎಂಗೇಜ್‌ಮೆಂಟ್‌ ಸುದ್ದಿ ಹರಿದಾಡುತ್ತಿದೆ.

ರಾಘವ ಚಡ್ಡಾ ಸದ್ಯ ರಾಜ್ಯಸಭೆ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪರಿಣಿತಿ ಚೋಪ್ರಾ ಬಾಲಿವುಡ್‌ ಸಿನಿಮಾಗಳಲ್ಲಿ ನಟಿಸಿ ಜನಪ್ರಿಯ ನಟಿ ಏನಿಸಿಕೊಂಡಿದ್ದಾರೆ. ಜನಪ್ರಿಯ ನಟಿ ಪ್ರಿಯಾಂಕ ಚೋಪ್ರಾ ಜೋನಾಸ್‌ ಸಂಬಂಧಿಯೂ ಆಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.