ADVERTISEMENT

ಮದುವೆ ಸಮಾರಂಭ: ಉದಯಪುರ ತಲುಪಿದ ರಾಘವ್ ಚಡ್ಡಾ-ಪರಿಣಿತಿ ಚೋಪ್ರಾ

ಪಿಟಿಐ
Published 22 ಸೆಪ್ಟೆಂಬರ್ 2023, 12:35 IST
Last Updated 22 ಸೆಪ್ಟೆಂಬರ್ 2023, 12:35 IST
<div class="paragraphs"><p>ರಾಘವ್ ಚಡ್ಡಾ, ಪರಿಣಿತಿ ಚೋಪ್ರಾ</p></div>

ರಾಘವ್ ಚಡ್ಡಾ, ಪರಿಣಿತಿ ಚೋಪ್ರಾ

   

ಜೈಪುರ: ಆಮ್‌ ಆದ್ಮಿ ಪಕ್ಷದ (ಎಎಪಿ) ನಾಯಕ ರಾಘವ್‌ ಚಡ್ಡಾ ಮತ್ತು ಬಾಲಿವುಡ್‌ ನಟಿ ಪರಿಣಿತಿ ಚೋಪ್ರಾ ಅವರ ವಿವಾಹವು ಉದಯಪುರದ ಲೀಲಾ ಪ್ಯಾಲೇಸ್‌ನಲ್ಲಿ ನಡೆಯಲಿದ್ದು, ಇಂದು (ಶುಕ್ರವಾರ) ರಾಘವ್‌ ಮತ್ತು ಪರಿಣಿತಿ ರಾಜಸ್ಥಾನದ ಉದಯಪುರಕ್ಕೆ ಆಗಮಿಸಿದ್ದಾರೆ.

ಶನಿವಾರ ಮತ್ತು ಭಾನುವಾರ ನಡೆಯಲಿರುವ ವಿವಾಹ ಸಮಾರಂಭದಲ್ಲಿ ಪ್ರಮುಖ ರಾಜಕಾರಣಿಗಳು ಮತ್ತು ಚಿತ್ರರಂಗದ ಪ್ರಮುಖರು ಭಾಗವಹಿಸುವ ನಿರೀಕ್ಷೆಯಿದೆ.

ADVERTISEMENT

ಉದಯಪುರದ ದಬೋಕ್‌ ವಿಮಾನ ನಿಲ್ದಾಣಕ್ಕೆ ಬಂದಿಳಿದ ರಾಘವ್‌ ಅವರು ತಮ್ಮ ಕುಟುಂಬದೊಂದಿಗೆ ಹೋಟೆಲ್‌ಗೆ ತೆರಳಿದರು.

ಪರಿಣಿತಿ ಅವರ ಸಹೋದರಿ ಪ್ರಿಯಾಂಕಾ ಚೋಪ್ರಾ ಕೂಡ ಮದುವೆಯಲ್ಲಿ ಪಾಲ್ಗೊಳ್ಳಲು ಶನಿವಾರ ಉದಯಪುರಕ್ಕೆ ಆಗಮಿಸುವ ಸಾಧ್ಯತೆಯಿದೆ. ಅಲ್ಲದೆ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ಪತ್ನಿ ಮತ್ತು ಮಕ್ಕಳೊಂದಿಗೆ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಭಾನುವಾರ ನಡೆಯಲಿರುವ ಮದುವೆ ಸಮಾರಂಭದಲ್ಲಿ ಪಂಜಾಬ್‌ ಮುಖ್ಯಮಂತ್ರಿ ಭಗವಂತ್‌ ಮಾನ್‌, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹಲೋತ್‌ ಮತ್ತು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್‌ ಬಘೇಲ್‌ ಸೇರಿದಂತೆ ಇತರೆ ಗಣ್ಯರು ಭಾಗವಹಿಸಲಿದ್ದಾರೆ.

ಪರಿಣಿತಿ ಚೋಪ್ರಾ ಮತ್ತು ರಾಘವ್‌ ಚಡ್ಡಾ ಅವರು 2023ರ ಮೇ ತಿಂಗಳಲ್ಲಿ ದೆಹಲಿಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಸಮಾರಂಭದಲ್ಲಿ ಕುಟುಂಬ ಸದಸ್ಯರು ಹಾಗೂ ರಾಜಕೀಯ ಮುಖಂಡರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.