ADVERTISEMENT

ಹೊಸ ಲುಕ್‌ನಲ್ಲಿ ಪಾರೂಲ್‌ ಯಾದವ್‌

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2021, 5:42 IST
Last Updated 27 ಅಕ್ಟೋಬರ್ 2021, 5:42 IST
   

ದಕ್ಷಿಣ ಭಾರತದ ನಟಿ ಪಾರೂಲ್‌ ಯಾದವ್‌ ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಮಂಗಳವಾರ ಫೋಟೊಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳ ಮನ ಗೆದ್ದಿದ್ದಾರೆ.

ಸ್ಪೇನ್‌ ಪ್ರವಾಸದಲ್ಲಿರುವ ಪಾರೂಲ್‌ ರೆಸ್ಟೋರೆಂಟ್‌ವೊಂದರಲ್ಲಿ ಕುಳಿತಿರುವ ಫೋಟೊಗಳನ್ನು ಶೇರ್ ಮಾಡಿದ್ದು#ThoughtfulTuesday ಎಂದು ಬರೆದುಕೊಂಡಿದ್ದಾರೆ.

ಕೋವಿಡ್‌ನಿಂದ ಚೇತರಿಸಿಕೊಂಡ ಬಳಿಕ ಮೊದಲ ಬಾರಿಗೆ ಯುರೋಪ್‌ ಪ್ರವಾಸ ಕೈಗೊಂಡಿದ್ದಾರೆ. ಕನ್ನಡ ಸೇರಿದಂತೆ ಹಿಂದಿ ಹಾಗೂ ತಮಿಳು ಸಿನಿಮಾಗಳಲ್ಲಿ ನಟಿಸುವುದಕ್ಕೆ ಈಗಾಗಲೇ ಸಹಿ ಮಾಡಿರುವ ಪಾರೂಲ್‌ ಭಾರತಕ್ಕೆ ಮರಳಿದ ಬಳಿಕ ಚಿತ್ರೀಕರಣದಲ್ಲಿ ತೊಡಗಿಸಿಕೊಳ್ಳಲ್ಲಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.