ನಟ ಶಿವರಾಜ್‌ಕುಮಾರ್ ಅವರು ‘ಪೆದ್ದಿ’ ಸಿನಿಮಾ ಮೂಲಕ ತೆಲುಗು ಚಿತ್ರರಂಗದಲ್ಲೂ ಮಿಂಚಲು ಸಜ್ಜಾಗಿದ್ದಾರೆ. ಈ ಪ್ಯಾನ್ ಇಂಡಿಯಾ ಚಿತ್ರದಲ್ಲಿ ನಾಯಕನಾಗಿ ರಾಮ್ ಚರಣ್ ಅಭಿನಯಿಸುತ್ತಿದ್ದು, ಪಾತ್ರಕ್ಕಾಗಿ ಭರ್ಜರಿಯಾಗಿ ತಯಾರಾಗಿದ್ದಾರೆ. ‘ಪೆದ್ದಿ’ ಸಿನಿಮಾದ ಶೂಟಿಂಗ್ ಬುಧವಾರದಿಂದ ಪ್ರಾರಂಭವಾಗಿದೆ.
ಜಿಮ್‌ನಲ್ಲಿ ದೇಹ ಹುರಿಗೊಳಿಸಿರುವ ರಾಮ್ ಚರಣ್ ಸಿನಿಮಾದಲ್ಲಿ ರಗಡ್ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ‘ಉಪ್ಪೇನ’ ಚಿತ್ರದ ನಿರ್ದೇಶಕ ಬುಚ್ಚಿಬಾಬು ಸನಾ ನಿರ್ದೇಶನ ‘ಪೆದ್ದಿ’ ಸ್ಪೋರ್ಟ್ಸ್ ಆ್ಯಕ್ಷನ್ ಡ್ರಾಮಾ ಕಥಾಹಂದರವನ್ನು ಹೊಂದಿದೆ. ರಾಮ್ ಚರಣ್‌ಗೆ ಜಾಹ್ನವಿ ಕಪೂರ್ ನಾಯಕಿಯಾಗಿದ್ದು, ಜಗಪತಿ ಬಾಬು ಮತ್ತು ದಿವೇಂದು ಶರ್ಮಾ ಪ್ರಮುಖ ಪಾತ್ರಗಳಲ್ಲಿ ನಟಿಸಲಿದ್ದಾರೆ. 2026ರ ಮಾರ್ಚ್ 27ಕ್ಕೆ ‘ಪೆದ್ದಿ’ ಸಿನಿಮಾ ಬಿಡುಗಡೆ ಆಗಲಿದೆ.
ಚಿತ್ರಕ್ಕೆ ಎ.ಆರ್. ರೆಹಮಾನ್ ಸಂಗೀತ ನೀಡುತ್ತಿದ್ದು, ವೆಂಕಟ ಸತೀಶ್ ಕಿಲಾರು ಬಂಡವಾಳ ಹೂಡಿದ್ದಾರೆ. ಮೈತ್ರಿ ಮೂವೀ ಮೇಕರ್ಸ್ ಮತ್ತು ಸುಕುಮಾರ್ ರೈಟಿಂಗ್ಸ್ ನಿರ್ಮಾಣದಲ್ಲಿ ಸಾಥ್ ನೀಡಿವೆ. ಆರ್. ರತ್ನವೇಲು ಛಾಯಾಚಿತ್ರಗ್ರಹಣವಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.