ADVERTISEMENT

Kannada Movie | ಅಕ್ಷತಾ ಪಾಂಡವಪುರ ನಟನೆಯ ‘ಪಿಂಕಿ ಎಲ್ಲಿ’ ಇಂದು ತೆರೆಗೆ

​ಪ್ರಜಾವಾಣಿ ವಾರ್ತೆ
Published 2 ಜೂನ್ 2023, 0:55 IST
Last Updated 2 ಜೂನ್ 2023, 0:55 IST
ಅಕ್ಷತಾ ಪಾಂಡವಪುರ  
ಅಕ್ಷತಾ ಪಾಂಡವಪುರ     

ಹಲವು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡು ಪ್ರಶಸ್ತಿ ಹಾಗೂ ಪ್ರಶಂಸೆ ಪಡೆದಿರುವ ‘ಪಿಂಕಿ ಎಲ್ಲಿ?’ ಸಿನಿಮಾ ಇಂದು(ಜೂನ್ 2)ಬಿಡುಗಡೆಯಾಗುತ್ತಿದೆ‌.

‘ಸುಮಾರು ಮೂರು ವರ್ಷಗಳ ಹಿಂದೆ ಪ್ರಾರಂಭವಾದ ಕಥೆಯಿದು. ಬೆಂಗಳೂರಿನಲ್ಲಿ ನಡೆದ ನೈಜ ಘಟನೆಯೂ ಹೌದು. ಮಗುವೊಂದು ಕಾಣೆಯಾಗಿರುತ್ತದೆ. ಆದರೆ ಈ ಕಥೆ ಮಗುವಿನ ಸುತ್ತ ಇರುವುದಿಲ್ಲ. ಮಗುವನ್ನು ಕಳೆದುಕೊಂಡವರ ಸುತ್ತ ಇರುತ್ತದೆ. ಕಥೆಯ ಒಂದೆಳೆ ಕೇಳಿ ಮೆಚ್ಚಿಕೊಂಡ ನಿರ್ಮಾಪಕ ಕೃಷ್ಣೇಗೌಡ ಅವರು ಚಿತ್ರ ನಿರ್ಮಾಣಕ್ಕೆ ಮುಂದಾದರು. ಅಕ್ಷತಾ ಪಾಂಡವಪುರ, ದೀಪಕ್ ಸುಬ್ರಹ್ಮಣ್ಯ, ಪೃಥ್ವಿ, ಗುಂಜಲಮ್ಮ, ಸಂಗಮ್ಮ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ‌. ಅದರಲ್ಲೂ ಗುಂಜಲಮ್ಮ ಹಾಗೂ ಸಂಗಮ್ಮ ಇಬ್ಬರೂ ಚಿತ್ರದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇವರಿಬ್ಬರೂ ಸ್ಲಂ ನಿವಾಸಿಗಳು. ನಟನೆ ಗೊತ್ತಿಲ್ಲದ ಇವರು ಸಹಜವಾಗಿ ಅಭಿನಯಿಸಿರುವುದು ಈ ಚಿತ್ರದ ವಿಶೇಷ’ ಎನ್ನುತ್ತಾರೆ ನಿರ್ದೇಶಕ ಪೃಥ್ವಿ ಕೋಣನೂರು.

‘ಇಲ್ಲಿ ನಿರ್ದೇಶಕರು ಕಥೆ ಹೇಳುವ ರೀತಿಯೇ ವಿಭಿನ್ನವಾಗಿದೆ. ಅದು ನನಗೂ ಆಶ್ಚರ್ಯ ತಂದಿತ್ತು. ಈ ಚಿತ್ರದಲ್ಲಿ ಮಗುವನ್ನು ಕಳೆದುಕೊಂಡಿರುವ ತಾಯಿಯ ಪಾತ್ರ ನಿರ್ವಹಿಸಿದ್ದೇನೆ’ ಎಂದರು ನಟಿ ಅಕ್ಷತಾ ಪಾಂಡವಪುರ. 

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.