ADVERTISEMENT

ಜಾಹೀರಾತಿನಲ್ಲಿ ತಪ್ಪು ಸಂದೇಶ: ತೆಲುಗು ನಟ ಅಲ್ಲು ಅರ್ಜುನ್‌ ವಿರುದ್ಧ ಎಫ್‌ಐಆರ್‌

​ಪ್ರಜಾವಾಣಿ ವಾರ್ತೆ
Published 12 ಜೂನ್ 2022, 7:39 IST
Last Updated 12 ಜೂನ್ 2022, 7:39 IST
ಅಲ್ಲು ಅರ್ಜುನ್‌
ಅಲ್ಲು ಅರ್ಜುನ್‌   

ಹೈದರಾಬಾದ್‌: ವಿದ್ಯಾರ್ಥಿಗಳು ಮತ್ತು ಪೋಷಕರನ್ನುದಾರಿ ತಪ್ಪಿಸುವ ಜಾಹೀರಾತಿನಲ್ಲಿ ನಟ ಅಲ್ಲು ಅರ್ಜುನ್‌ ಕಾಣಿಸಿಕೊಂಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ದೂರು ದಾಖಲಿಸಲಾಗಿದೆ.

ತೆಲಂಗಾಣದ ಸಾಮಾಜಿಕ ಕಾರ್ಯಕರ್ತಕೋತ ಉಪೇಂದ್ರ ರೆಡ್ಡಿ ಅವರು ಇಲ್ಲಿನಅಂಬರ್‌ಪೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಶೈಕ್ಷಣಿಕ ಸಂಸ್ಥೆಯೊಂದರ ಜಾಹೀರಾತಿನಲ್ಲಿ ಕಾಣಿಸಿಕೊಂಡಿರುವ ಅಲ್ಲು ಅರ್ಜುನ್ ತಪ್ಪು ಮಾಹಿತಿ ರವಾನಿಸುತ್ತಿದ್ದಾರೆ, ಜನರಿಗೆ ಮೋಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲು ಅರ್ಜುನ್‌ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ.

ಚೈತನ್ಯ ಶೈಕ್ಷಣಿಕಜಾಹೀರಾತಿನಲ್ಲಿ ಅಲ್ಲು ಅರ್ಜುನ್‌ ಕಾಣಿಸಿಕೊಂಡಿದ್ದರು. ಇದರಲ್ಲಿ ಅವರು ಸಂಸ್ಥೆಯಲ್ಲಿ ಅಗ್ರ ಶ್ರೇಣಿ ಪಡೆದವರ ಬಗ್ಗೆ ಮಾಹಿತಿ ನೀಡಿದ್ದರು. ಆದರೆ ಜಾಹೀರಾತಿನಲ್ಲಿ ಅಲ್ಲು ಅರ್ಜುನ್‌ ಅವರು ನೀಡಿರುವ ಅಂಕಿ ಅಂಶಗಳು ತಪ್ಪಾಗಿವೆ ಎಂದು ಉಪೇಂದ್ರ ರೆಡ್ಡಿ ಆರೋಪ ಮಾಡಿದ್ದಾರೆ.

ADVERTISEMENT

ಈ ಘಟನೆ ಬಗ್ಗೆ ಅಲ್ಲು ಅರ್ಜುನ್‌ ಯಾವುದೇ ಹೇಳಿಕೆ ನೀಡಿಲ್ಲ. ಈ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಯಾಗುತ್ತಿದೆ. ಕೆಲವರು ಅಲ್ಲು ಅರ್ಜುನ್‌ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ವಿವಾದಿತ ಜಾಹೀರಾತುಗಳಲ್ಲಿ ಅಭಿನಯಿಸುವುದು ಬೇಡ ಎಂದು ಕೆಲ ಅಭಿಮಾನಿಗಳು ಸಲಹೆ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.