ಮುಂಬೈ: ‘ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರಿಗೆ ಚಾಕುವಿನಿಂದ ಇರಿಯಲಾಗಿದ್ದ ಕೃತ್ಯದಲ್ಲಿ ಒಬ್ಬರಿಗಿಂತ ಹೆಚ್ಚು ಮಂದಿ ಭಾಗಿಯಾಗಿರಬಹುದು’ ಎಂದು ಪೊಲೀಸರು ಶಂಕಿಸಿದ್ದಾರೆ.
ಕೃತ್ಯಕ್ಕೆ ಸಂಬಂಧಿಸಿದಂತೆ ಪೊಲೀಸರು, ಅಕ್ರಮವಾಗಿ ನೆಲಸಿದ್ದ ಬಾಂಗ್ಲಾ ಪ್ರಜೆಯನ್ನು ಬಂಧಿಸಿದ್ದರು. ಬಂಧಿತನನ್ನು ಹೆಚ್ಚಿನ ವಿಚಾರಣೆಗೆ ವಶಕ್ಕೆ ಪಡೆಯಲು ಇದೂ ಕಾರಣ ಎಂದೂ ತಿಳಿಸಿದ್ದಾರೆ.
ತನಿಖೆಯ ಭಾಗವಾಗಿ ಸೈಫ್ ಅಲಿ ಖಾನ್ ಅವರ ರಕ್ತದ ಮಾದರಿ, ಧರಿಸಿದ್ದ ಬಟ್ಟೆ ಹಾಗೂ ಆ ಸಂದರ್ಭ ಸ್ಥಳದಲ್ಲಿದ್ದ ಸಿಬ್ಬಂದಿಯ ರಕ್ತದ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದಿದ್ದಾರೆ.
ಕೃತ್ಯದ ಸ್ಥಳದಲ್ಲಿ ಸಂಗ್ರಹಿಸಲಾಗಿದ್ದ ಬೆರಳಚ್ಚು ಮಾದರಿಗಳು, ಈಗ ಬಂಧಿಸಲಾಗಿರುವ ಆರೋಪಿಯ ಬೆರಳಚ್ಚಿನ ಜೊತೆಗೂ ಹೋಲಿಕೆ ಆಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.