ಬಾಲಿವುಡ್ ನಟಿ, ರೂಪದರ್ಶಿ ಪೂನಂ ಪಾಂಡೆ ಅವರು ಕ್ಯಾನ್ಸರ್‌ನಿಂದ ಶುಕ್ರವಾರ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ
ಇನ್‌ಸ್ಟಾಗ್ರಾಂ
ಪೂನಂ ಪಾಂಡೆ ಅವರು ಕೆಲವು ತಿಂಗಳುಗಳಿಂದ ಗರ್ಭಕಂಠ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶುಕ್ರವಾರ ಬೆಳಗ್ಗೆ ಉತ್ತರಪ್ರದೇಶದ ತಮ್ಮ ಕಾನ್ಪುರ ನಿವಾಸದಲ್ಲಿ ನಿಧನರಾದರು ಎನ್ನಲಾಗಿದೆ
ಪೂನಂ ನಿಧನದ ಬಗ್ಗೆ ಅವರ ಮ್ಯಾನೇಜರ್ ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಪ್ರಕಟಿಸಿದ್ದಾರೆ.
‘ಈ ದಿನದ ಬೆಳಗನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ, ಪೂನಂ ಪಾಂಡೆ ಅವರು ಗರ್ಭಕಂಠ ಕ್ಯಾನ್ಸರ್‌ನಿಂದ ನಮ್ಮನ್ನು ಅಗಲಿದರು ಎಂದು ಹೇಳಲು ದುಃಖವಾಗುತ್ತಿದೆ. ಜೀವನದಲ್ಲಿ ಪ್ರೀತಿ, ವಿನಯದಿಂದ ವರ್ತಿಸಿದ್ದ ಅವರ ಖಾಸಗಿ ಬದುಕಿನ ಬಗ್ಗೆ ಮಾತನಾಡಬಾರದು ಎಂದು ಮನವಿ ಮಾಡುತ್ತೇವೆ‘ ಎಂದು ಅವರ ಮ್ಯಾನೇಜರ್ ಇನ್‌ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.
ಬೋಲ್ಡ್ ಫೋಟೊಗಳು, ಬೋಲ್ಡ್ ನಟನೆ ಹಾಗೂ ವಿವಾದಾತ್ಮಕ ಹೇಳಿಕೆಗಳಿಂದ ಪೂನಂ ಪಾಂಡೆ ಜನಪ್ರಿಯರಾಗಿದ್ದರು. ಬಿಹಾರದಲ್ಲಿ ಜನಿಸಿದ ಪೂನಂ ಓದಿ, ಬೆಳದದ್ದು ಮುಂಬೈನಲ್ಲಿ. ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಅವರು 2013ರಲ್ಲಿ ಹಿಂದಿಯ ನಶಾ ಸಿನಿಮಾದ ಮೂಲಕ ಬಾಲಿವುಡ್ ಪ್ರವೇಶಿಸಿದರು.
ನಂತರ ಅವರು ತೆಲುಗು, ತಮಿಳು ಸಿನಿಮಾಗಳಲ್ಲೂ ನಟಿಸಿದ್ದರು. ಕನ್ನಡದ ‘ಲವ್ ಈಸ್ ಪಾಯ್ಸನ್‘ ಸಿನಿಮಾದ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದಾರೆ. 2011ರಲ್ಲಿ ಭಾರತ ಕ್ರಿಕೆಟ್ ತಂಡವು ವಿಶ್ವಕಪ್ ಗೆದ್ದರೆ ತಂಡದ ಎದುರು ನಾನು ಸಂಪೂರ್ಣವಾಗಿ ಬೆತ್ತಲಾಗುವೆ ಎಂದು ಹೇಳುವ ಮೂಲಕ ಸುದ್ದಿಯಾಗಿದ್ದರು. ಇದಾದ ಬಳಿಕವೂ ಅವರು ಹಲವು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು.
ಪೂನಂ ಪಾಂಡೆ
ಪೂನಂ ಪಾಂಡೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.