ADVERTISEMENT

ಗುಜರಾತ್‌: ಜನಪ್ರಿಯ ಗಾಯಕಿ ವೈಶಾಲಿ ಮೃತದೇಹ ಪತ್ತೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 30 ಆಗಸ್ಟ್ 2022, 7:29 IST
Last Updated 30 ಆಗಸ್ಟ್ 2022, 7:29 IST
ವೈಶಾಲಿ ಬುಲ್ಸಾರ
ವೈಶಾಲಿ ಬುಲ್ಸಾರ   

ಅಹಮದಾಬಾದ್‌: ಗುಜರಾತ್‌ ರಾಜ್ಯದ ಜನಪ್ರಿಯ ಗಾಯಕಿ,ವೈಶಾಲಿ ಬುಲ್ಸಾರ ಅವರ ಮೃತದೇಹ ಪತ್ತೆಯಾಗಿದೆ ಎಂದು ಗುಜರಾತ್‌ ಪೊಲೀಸರು ತಿಳಿಸಿದ್ದಾರೆ.

34 ವರ್ಷದ ಮೈಶಾಲಿ, ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಈ ಬಗ್ಗೆ ಅವರ ಪತಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಸೋಮವಾರ ಗುರ್ಜಾರ್‌ ಪರ್ಡಿ ತಾಲ್ಲೂಕಿನ ನಿರ್ಜನ ಪ್ರದೇಶದಲ್ಲಿ ವೈಶಾಲಿ ಅವರ ಕಾರಿನ ಹಿಂದಿನ ಸೀಟಿನಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿರುವುದಾಗಿ ಹೇಳಿದ್ದಾರೆ.

ಇವುಗಳನ್ನೂ ಓದಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.