
ಮುಂಬೈ: ಸಂದೀಪ್ ರೆಡ್ಡಿ ನಿರ್ದೇಶನದ, ನಟ ಪ್ರಭಾಸ್ ನಟನೆಯ ಬಹುನಿರೀಕ್ಷಿತ ಸ್ಪಿರಿಟ್ ಚಿತ್ರದ ಚಿತ್ರೀಕರಣಕ್ಕೆ ಇಂದು (ಭಾನುವಾರ) ಅಧಿಕೃತವಾಗಿ ಚಾಲನೆ ದೊರತಿದೆ.
ಈ ಸಂಬಂಧ ನಿರ್ಮಾಣ ಸಂಸ್ಥೆ ಟಿ–ಸೀರಿಸ್ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಂಚಿಕೊಂಡು ಮಾಹಿತಿ ನೀಡಿದೆ.
ಚಿತ್ರದ ಮುಹೂರ್ತವನ್ನು ಮೆಗಾಸ್ಟಾರ್ ಚಿರಂಜೀವಿ ನಡೆಸಿಕೊಟ್ಟಿದ್ದು, ಈ ವೇಳೆ ಚಿತ್ರದ ನಾಯಕಿ ತೃಪ್ತಿ ದಿಮ್ರಿ, ನಿರ್ದೇಶಕ ವಂಗಾ ಕಾಣಿಸಿಕೊಂಡಿದ್ದಾರೆ.
ಸ್ಪಿರಿಟ್ ಚಿತ್ರೀಕರಣ ಪ್ರಾರಂಭವಾಗಿದೆ. ಭಾರತದ ಸೂಪರ್‌ಸ್ಟಾರ್ ಪ್ರಭಾಸ್ ಅಭಿನಯಿಸುತ್ತಿರುವ ಸಿನಿಮಾ ಅದ್ಭುತವಾಗಿ ಮೂಡಿಬರಲಿದೆ ಎಂದು ಚಿತ್ರತಂಡ ಪೋಸ್ಟ್‌ನಲ್ಲಿ ತಿಳಿಸಿದೆ.
ಈ ಚಿತ್ರದಲ್ಲಿ ಹಿರಿಯ ನಟ ಪ್ರಕಾಶ್ ರಾಜ್ ಮತ್ತು ವಿವೇಕ್ ಒಬೆರಾಯ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಈ ಮೊದಲು ದೀಪಿಕಾ ಪಡುಕೋಣೆ ಚಿತ್ರದ ನಾಯಕಿ ಎನ್ನಲಾಗಿತ್ತು. ಕಾರಣಾಂತರಗಳಿಂದ ಅವರು ಚಿತ್ರತಂಡದಿಂದ ಹೊರನಡೆದಿದ್ದು ಸುದ್ದಿಯಾಗಿತ್ತು. ‘ಅನಿಮಲ್’ ಚಿತ್ರದಲ್ಲಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದ ತೃಪ್ತಿ ದಿಮ್ರಿ ಚಿತ್ರದ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎಂದು ಚಿತ್ರತಂಡ ಘೋಷಿಸಿತ್ತು
‘ಅರ್ಜುನ್ ರೆಡ್ಡಿ’, ‘ಕಬೀರ್ ಸಿಂಗ್’ ಮೊದಲಾದ ಚಿತ್ರಗಳನ್ನು ನಿರ್ದೇಶಿಸಿರುವ ವಂಗಾ ಅವರ ಈ ಸಿನಿಮಾದ ಮೇಲೆ ನಿರೀಕ್ಷೆ ಹೆಚ್ಚಾಗಿದೆ. ತೆಲುಗು, ಕನ್ನಡ, ಹಿಂದಿ, ಮಲಯಾಳ, ತಮಿಳು ಸೇರಿದಂತೆ ಹಲವು ಭಾಷೆಗಳಲ್ಲಿ ‘ಸ್ಪಿರಿಟ್’ ಬಿಡುಗಡೆಯಾಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.