‘ಕಲ್ಕಿ 2898 ಎಡಿ’ ಸಿನಿಮಾ ಬಳಿಕ ನಟ ಪ್ರಭಾಸ್ ನಟನೆಯ ಹೊಸ ಸಿನಿಮಾ ಬಿಡುಗಡೆಯ ದಿನಾಂಕ ಘೋಷಣೆಯಾಗಿದೆ. ಮಾರುತಿ ನಿರ್ದೇಶನದ ‘ದಿ ರಾಜಾ ಸಾಬ್’ ಸಿನಿಮಾ ಡಿ.5ರಂದು ತೆರೆಕಾಣಲಿದೆ.
ಚಿತ್ರದ ಟೀಸರ್ ಜೂನ್ 16ಕ್ಕೆ ರಿಲೀಸ್ ಆಗಲಿದೆ. ಈವರೆಗೂ ಆ್ಯಕ್ಷನ್ ಅವತಾರದಲ್ಲಿಯೇ ತೆರೆಗಳಲ್ಲಿ ಮಿಂಚಿದ್ದ ಪ್ರಭಾಸ್, ಇದೇ ಮೊದಲ ಬಾರಿಗೆ ‘ದಿ ರಾಜಾ ಸಾಬ್’ ಮೂಲಕ ಹಾರರ್ ಜಾನರ್ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪೀಪಲ್ ಮೀಡಿಯಾ ಫ್ಯಾಕ್ಟರಿ ಬ್ಯಾನರ್ ಅಡಿಯಲ್ಲಿ ಟಿ.ಜಿ. ವಿಶ್ವಪ್ರಸಾದ್ ನಿರ್ಮಾಣದಲ್ಲಿ ಈ ಚಿತ್ರ ಮೂಡಿಬರುತ್ತಿದೆ.
ಬಿಗ್ ಬಜೆಟ್‌ನ ಈ ಚಿತ್ರಕ್ಕೆ ಕಾರ್ತಿಕ್ ಪಳನಿ ಛಾಯಾಚಿತ್ರಗ್ರಹಣ, ತಮನ್ ಎಸ್. ಸಂಗೀತ ನಿರ್ದೇಶನವಿದೆ. ಮಾಳವಿಕಾ ಮೋಹನನ್, ನಿಧಿ ಅಗರವಾಲ್ ಮತ್ತು ರಿಧಿ ಕುಮಾರ್ ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ತೆಲುಗು, ಹಿಂದಿ, ತಮಿಳು, ಕನ್ನಡ ಮತ್ತು ಮಲಯಾಳ ಭಾಷೆಗಳಲ್ಲಿ ಈ ಚಿತ್ರ ರಿಲೀಸ್ ಆಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.