ADVERTISEMENT

ಹೊಸ ವರ್ಷಕ್ಕೆ ಪ್ರಭಾಸ್ ನಟನೆಯ ‘ದಿ ರಾಜಾಸಾಬ್‌’

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2025, 0:30 IST
Last Updated 6 ನವೆಂಬರ್ 2025, 0:30 IST
ಪ್ರಭಾಸ್‌ 
ಪ್ರಭಾಸ್‌    

ತೆಲುಗು ನಟ ಪ್ರಭಾಸ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘ದಿ ರಾಜಾಸಾಬ್’ ಸಿನಿಮಾ ಜ.9ರಂದೇ ತೆರೆಕಾಣಲಿದೆ ಎಂದು ಚಿತ್ರತಂಡ ಸ್ಪಷ್ಟಪಡಿಸಿದೆ. ಈ ಮೂಲಕ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಊಹಾಪೋಹದ ಸುದ್ದಿಗೆ ತಂಡ ತೆರೆಎಳೆದಿದೆ. 

ಈ ಹಿಂದೆ ಡಿ.5ರಂದು ಸಿನಿಮಾ ತೆರೆಕಾಣಲಿದೆ ಎಂದು ಚಿತ್ರತಂಡ ಹೇಳಿತ್ತು. ವಾರದ ಹಿಂದೆ ಜ.9ರಂದು ಸಿನಿಮಾ ತೆರೆಕಾಣಲಿದೆ ಎಂದು ಪ್ರಭಾಸ್‌ ಇನ್‌ಸ್ಟಾಗ್ರಾಂನಲ್ಲಿ ತಿಳಿಸಿದ್ದರು. ಇದಾದ ಬಳಿಕ ಸಿನಿಮಾ ಮತ್ತೆ ಮುಂದೂಡಿಕೆಯಾಗಲಿದೆ ಎನ್ನುವ ಗಾಳಿಸುದ್ದಿ ಹರಿದಾಡಿತ್ತು. ಮಾರುತಿ ನಿರ್ದೇಶನದ ಈ ಪ್ಯಾನ್‌ ಇಂಡಿಯಾ ಸಿನಿಮಾವನ್ನು ಪೀಪಲ್‌ ಮೀಡಿಯಾ ಫ್ಯಾಕ್ಟರಿ ನಿರ್ಮಾಣ ಮಾಡಿದೆ. ಈ ಹಾರರ್-ಫ್ಯಾಂಟಸಿ ಡ್ರಾಮಾ ಸಿನಿಮಾದಲ್ಲಿ ಹಲವು ಶೇಡ್‌ಗಳಲ್ಲಿ ಪ್ರಭಾಸ್ ಕಾಣಿಸಿಕೊಳ್ಳಲಿದ್ದಾರೆ. ಟಿ.ಜಿ.ವಿಶ್ವ ಪ್ರಸಾದ್ ಬಂಡವಾಳ ಹೂಡಿರುವ ಈ ಸಿನಿಮಾ ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಸಿದ್ಧವಾಗಿದೆ. ಸಂಜಯ್ ದತ್, ಜರೀನಾ ವಹಾಬ್, ಬೊಮನ್ ಇರಾನಿ, ನಿಧಿ ಅಗರವಾಲ್, ಮಾಳವಿಕಾ ಮೋಹನನ್ ಮತ್ತು ರಿದ್ಧಿ ಕುಮಾರ್ ಚಿತ್ರದ ತಾರಾಬಳಗದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT