ADVERTISEMENT

ಪ್ರಭಾಸ್ ನಟನೆಯ 'ದಿ ರಾಜಾಸಾಬ್' ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 29 ಡಿಸೆಂಬರ್ 2025, 11:17 IST
Last Updated 29 ಡಿಸೆಂಬರ್ 2025, 11:17 IST
   

ಪ್ರಭಾಸ್ ನಟನೆಯ 'ದಿ ರಾಜಾಸಾಬ್' ಚಿತ್ರದ 2.0 ಟ್ರೇಲರ್ ಇಂದು (ಸೋಮವಾರ) ಬಿಡುಗಡೆಯಾಗಿದೆ. ಈ ಕುರಿತು ಎಕ್ಸ್ ಖಾತೆಯಲ್ಲಿ ‘ನಿಮ್ಮ ನಿರೀಕ್ಷೆಗೂ ಮೀರಿದ ಅಭಿನಯ, ಸಂಗೀತ, ಚಿತ್ರಕಥೆ ಹೊಂದಿರುವ ಈ ಚಿತ್ರವು ಸಂಕ್ರಾತಿ ವೇಳೆ ತೆರೆಗೆ ಬರಲಿದೆ’ ಎಂದು ಚಿತ್ರತಂಡ ಹೇಳಿದೆ.

ಈ ಚಿತ್ರವು ಜನವರಿ 9 ರಂದು ಬಿಡುಗಡೆಯಾಗಲಿದೆ.  'ದಿ ರಾಜಾಸಾಬ್'  ಆ್ಯಕ್ಷನ್ ಥ್ರಿಲ್ಲರ್ ಕಥೆಯಲ್ಲಿ ನಟ ಪ್ರಭಾಸ್ ಅವರು ಮಾಸ್ ನೋಟದಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಚಿತ್ರವು ಪೀಪಲ್ ಮೀಡಿಯಾಕ್ಟರಿ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿದ್ದು, ಮಾರುತಿ ಅವರು ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಥಮನ್. ಎಸ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ.

ADVERTISEMENT

ನಿಧಿ ಅಗರ್‌ವಾಲ್, ಸಂಜಯ್ ದತ್, ಮಾಳವಿಕಾ ಮೋಹನ್ ಸೇರಿದಂತೆ ಅನೇಕರು ತಾರಾಗಣದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.