ಟಾಲಿವುಡ್ ನಟ ಪ್ರಭಾಸ್ ಇಂದು 46ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ವಿಶೇಷ ಸಂದರ್ಭದಲ್ಲಿ ತಮ್ಮ ಮುಂದಿನ ಚಿತ್ರ ‘ಫೌಝಿ’ಯ ಫಸ್ಟ್‌ಲುಕ್ ಪೋಸ್ಟರ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
ಹನು ರಾಘವಪುಡಿ ನಿರ್ದೇಶನದ ‘ಫೌಝಿ’ ಚಿತ್ರದಲ್ಲಿ ಇಮಾನ್ವಿ ಇಸ್ಮಾಯಿಲ್ ನಾಯಕಿಯಾಗಿ ನಟಿಸಲಿದ್ದಾರೆ. ಹಿರಿಯ ನಟರಾದ ಅನುಪಮ್ ಖೇರ್, ಮಿಥುನ್ ಚಕ್ರವರ್ತಿ ಮತ್ತು ಜಯಪ್ರದಾ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರವನ್ನು ‘ಮೈತ್ರಿ ಮೂವಿ ಮೇಕರ್ಸ್’ ನಿರ್ಮಿಸುತ್ತಿದೆ.
ಏತನ್ಮಧ್ಯೆ, ಪ್ರಭಾಸ್ ನಟನೆಯ 'ದಿ ರಾಜಾ ಸಾಬ್' ಬಿಡುಗಡೆಗೆ ಸಜ್ಜಾಗಿದ್ದು, 2026ರ ಜನವರಿ 9ರಂದು ಬೆಳ್ಳಿತೆರೆ ಮೇಲೆ ರಾರಾಜಿಸಲಿದೆ. ಮಾರುತಿ ನಿರ್ದೇಶನದ ಈ ಚಿತ್ರದಲ್ಲಿ ಮಾಳವಿಕಾ ಮೋಹನನ್, ನಿಧಿ ಅಗರ್‌ವಾಲ್, ಸಂಜಯ್ ದತ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
‘ಕಲ್ಕಿ’ ಚಿತ್ರದ ಸೀಕ್ವೆಲ್‌ನಲ್ಲಿಯೂ ಪ್ರಭಾಸ್ ಕಾಣಿಸಿಕೊಳ್ಳಲಿದ್ದು, ಚಿತ್ರೀಕರಣ ಇನ್ನಷ್ಟೆ ಆರಂಭವಾಗಬೇಕಿದೆ. ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ಸ್ಪಿರಿಟ್ ಚಿತ್ರದಲ್ಲೂ ಪ್ರಭಾಸ್ ನಟಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.