ADVERTISEMENT

ಪ್ರಜಾವಾಣಿ ಸಿನಿ ಸಮ್ಮಾನ | ಸಿನಿಮಾಗಳಿಗೆ ಆಹ್ವಾನ; ಸಲ್ಲಿಕೆಗೆ ಇಂದು ಕೊನೆಯ ದಿನ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2025, 0:33 IST
Last Updated 11 ಏಪ್ರಿಲ್ 2025, 0:33 IST
   

‘ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ’-ಇದು ಚಂದನವನದ ಪ್ರತಿಭೆಗಳನ್ನು ಗುರುತಿಸುವ ಹಾಗೂ ನಮ್ಮ ಶ್ರೀಮಂತ ಸಿನಿಮಾ ಪರಂಪರೆಯನ್ನು ಆಚರಿಸುವ, ಸಂಭ್ರಮಿಸುವ, ಬೆಸೆಯುವ ವೇದಿಕೆ. ಇಂತಹ ‘ಸಿನಿ ಸಮ್ಮಾನ’ದ ಮೂರನೇ ಆವೃತ್ತಿಗೆ ವೇದಿಕೆ ಸಜ್ಜಾಗುತ್ತಿದೆ. 

2023ರಲ್ಲಿ ತನ್ನ ಅಮೃತ ಸಂಭ್ರಮದ ಸಂದರ್ಭದಲ್ಲಿ ‘ಪ್ರಜಾವಾಣಿ’ ಪ್ರಾರಂಭಿಸಿದ ಈ ಕಾರ್ಯಕ್ರಮ ಕನ್ನಡ ಚಿತ್ರರಂಗದವರ ಮನಸ್ಸಿನಲ್ಲಿ ಅಚ್ಚೊತ್ತಿದೆ. ಎರಡು ಆವೃತ್ತಿಗಳನ್ನು ಯಶಸ್ವಿಯಾಗಿ, ಅದ್ದೂರಿಯಾಗಿ ನಡೆಸಲಾಗಿದೆ.

ಇದೀಗ 2024ರಲ್ಲಿ ತೆರೆಕಂಡ ಸಿನಿಮಾಗಳನ್ನು ಮೂರನೇ ಆವೃತ್ತಿಗೆ ಪರಿಗಣಿಸಲಾಗುತ್ತಿದೆ. ಕೆಳಕಂಡ ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಮಾಡುವ ಮೂಲಕ ನೋಂದಣಿ ಮಾಡಿಕೊಂಡು ಸಿನಿಮಾಗಳನ್ನು ಸಲ್ಲಿಸಬಹುದಾಗಿದೆ. ಒಟ್ಟು 26 ವಿಭಾಗಗಳಲ್ಲಿ ಪ್ರಶಸ್ತಿಗಳು ಇರಲಿವೆ.     

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.