ಪ್ರಜ್ವಲ್ ದೇವರಾಜ್ ಅಭಿನಯದ ‘ಗಣ’ ಚಿತ್ರಕ್ಕೆ ಕೊನೆಗೂ ಬಿಡುಗಡೆ ಭಾಗ್ಯ ಕೂಡಿಬಂದಿದೆ. ಹರಿಪ್ರಸಾದ್ ಜಕ್ಕ ನಿರ್ದೇಶನದ ಚಿತ್ರ ಜನವರಿ 31ರಂದು ತೆರೆ ಕಾಣುತ್ತಿದೆ.
‘ವಿಭಿನ್ನ ಕಂಟೆಂಟ್ ಹೊಂದಿರುವ ಈ ಚಿತ್ರ ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಜನರನ್ನು ತಲುಪುತ್ತಿದೆ. ಆ್ಯಕ್ಷನ್ ಕಥೆಯನ್ನು ಹೊಂದಿರುವ ಚಿತ್ರವಿದು’ ಎಂದಿದ್ದಾರೆ ನಿರ್ದೇಶಕರು.
ಚೆರಿ ಕ್ರಿಯೇಷನ್ಸ್ ಲಾಂಛನದಲ್ಲಿ ಪಾರ್ಥು ಬಂಡವಾಳ ಹೂಡಿದ್ದು, ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಜೈ ಆನಂದ್ ಛಾಯಾಚಿತ್ರಗ್ರಹಣ, ಹರೀಶ್ ಕೊಮ್ಮೆ ಸಂಕಲನವಿದೆ.
ಯಶಾ ಶಿವಕುಮಾರ್, ವೇದಿಕಾ ಕುಮಾರ್, ಕೃಷಿ ತಾಪಂಡ, ವಿಶಾಲ್ ಹೆಗಡೆ, ರವಿ ಕಾಳೆ, ಸಂಪತ್ ರಾಜ್, ಶಿವರಾಜ್ ಕೆ.ಆರ್ ಪೇಟೆ, ರಮೇಶ್ ಭಟ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.