ಚಂದನವನದ ‘ಡೈನಾಮಿಕ್ ಪ್ರಿನ್ಸ್’ ನಟ ಪ್ರಜ್ವಲ್ ದೇವರಾಜ್ ನಟನೆಯ ‘ರಾಕ್ಷಸ’ ಸಿನಿಮಾ ಶಿವರಾತ್ರಿಯಂದು ಬಿಡುಗಡೆಯಾಗಲಿದೆ.
‘ಮಮ್ಮಿ’, ‘ದೇವಕಿ’ ಸಿನಿಮಾ ಖ್ಯಾತಿಯ ಲೋಹಿತ್ ಈ ಸಿನಿಮಾ ನಿರ್ದೇಶಿಸಿದ್ದಾರೆ. ಈವರೆಗೆ 36ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಪ್ರಜ್ವಲ್, ಇವೆಲ್ಲಕ್ಕಿಂತಲೂ ವಿಭಿನ್ನವಾಗಿ ‘ರಾಕ್ಷಸ’ ಚಿತ್ರದ ಮೂಲಕ ಪ್ರೇಕ್ಷಕರೆದುರಿಗೆ ಬರಲಿದ್ದಾರೆ. ‘ಇದು ಕೇವಲ ಹಾರರ್ ಸಿನಿಮಾ ಅಂದುಕೊಳ್ಳುವುದು ಸಹಜ. ಆದರೆ ‘ರಾಕ್ಷಸ’ನಿಗೆ ಭಾವನಾತ್ಮಕ ಕಥೆಯ ಜೊತೆಗೆ ಟೈಮ್ ಲೂಪ್ ಕಾನ್ಸೆಪ್ಟ್‌ನ ಸ್ಪರ್ಶವಿದೆ’ ಎಂದಿದೆ ಚಿತ್ರತಂಡ.
ಪ್ರಜ್ವಲ್ ನಾಯಕನಾಗಿ ನಟಿಸಿರುವ ಈ ಚಿತ್ರದಲ್ಲಿ ಶೋಭಾರಾಜ್, ವತ್ಸಲಾ ಮೋಹನ್, ಸಿದ್ಲಿಂಗು ಶ್ರೀಧರ್, ಆರ್ನ ರಾಥೋಡ್ ಸೇರಿದಂತೆ ಅನೇಕ ಕಲಾವಿದರು ಅಭಿನಯಿಸಿದ್ದಾರೆ. ‘ರಾಕ್ಷಸ’ ಸಿನಿಮಾದ ಶೇ 80ರಷ್ಟು ಚಿತ್ರೀಕರಣ ರಾಮೋಜಿ ಫಿಲಂ ಸಿಟಿಯಲ್ಲಿ ನಡೆದಿರುವುದು ವಿಶೇಷ. ರಾಮೇಶ್ವರಂ, ಗೋವಾ, ಬೆಂಗಳೂರಿನಲ್ಲಿ ಉಳಿದ ಭಾಗದ ಚಿತ್ರೀಕರಣ ನಡೆಸಲಾಗಿದೆ. ಶಾನ್ವಿ ಎಂಟರ್‌ಟೈನ್‌ಮೆಂಟ್‌ನಡಿ ದೀಪು ಬಿ.ಎಸ್ ಈ ಸಿನಿಮಾ ನಿರ್ಮಾಣ ಮಾಡಿದ್ದು, ಜೇಬಿನ್ ಪಿ ಜೋಕಬ್ ಛಾಯಾಚಿತ್ರಗ್ರಹಣ, ವಿನೋದ್ ಸಾಹಸ ನಿರ್ದೇಶನ, ವರುಣ್ ಉನ್ನಿ ಸಂಗೀತ ನಿರ್ದೇಶನವಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.