ADVERTISEMENT

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಆಯ್ಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 23 ಡಿಸೆಂಬರ್ 2025, 10:52 IST
Last Updated 23 ಡಿಸೆಂಬರ್ 2025, 10:52 IST
   

ಜನವರಿ 29ರಿಂದ ಫೆಬ್ರುವರಿ 6ರವರೆಗೆ ನಡೆಯಲಿರುವ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ನಟ ಪ್ರಕಾಶ್ ರಾಜ್ ಅವರು ರಾಯಭಾರಿಯಾಗಿ ಆಯ್ಕೆಯಾಗಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ಹಂಚಿಕೊಂಡಿದ್ದಾರೆ.

‘ವಿಧಾನಸೌಧದ ಮುಂಭಾಗದಲ್ಲಿ 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ ಆಗಲಿದೆ. ಈ ಬಾರಿಯ ಸಿನಿಮೋತ್ಸವದಲ್ಲಿ ಮಹಿಳಾ ಸಬಲೀಕರಣ ಆಧಾರಿತ ಚಿತ್ರಗಳಿಗೆ ಆದ್ಯತೆ ನೀಡಲಾಗುತ್ತದೆ. ರಾಜಾಜಿನಗರದ ಲುಲುಮಾಲ್‌ನಲ್ಲಿರುವ ಸಿನಿ ಪೊಲಿಸ್‌ನ 11 ಪರದೆಗಳಲ್ಲಿ ಹಾಗೂ ಡಾ. ರಾಜ್ ಕುಮಾರ್ ಭವನ, ಕಲಾವಿದರ ಸಂಘ, ಚಾಮರಾಜಪೇಟೆ ಹಾಗೂ ಬನಶಂಕರಿಯಲ್ಲಿರುವ ಸುಚಿತ್ರ ಫಿಲಂ ಸೊಸೈಟಿ ಚಿತ್ರಮಂದಿರದಲ್ಲಿ ಚಲನಚಿತ್ರಗಳ ಪ್ರದರ್ಶನ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

ಕನ್ನಡ ಮತ್ತು ಭಾರತೀಯ ಚಿತ್ರಗಳು ಸೇರಿದಂತೆ 60ಕ್ಕೂ ಹೆಚ್ಚು ದೇಶಗಳ 200 ಚಲನಚಿತ್ರಗಳು ಪ್ರದರ್ಶನಗೊಳ್ಳಲಿದೆ. ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಪಾಲ್ಗೊಂಡು ವಿವಿಧ ಪ್ರಶಸ್ತಿಗಳನ್ನು ಪಡೆದ ಮತ್ತು ಜನಮನ್ನಣೆಗಳಿಸಿದ ದೇಶ-ವಿದೇಶದ ಅತ್ಯುತ್ತಮ ಚಲನಚಿತ್ರಗಳು 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗವಹಿಸುತ್ತಿವೆ ಎಂದು ತಿಳಿಸಿದ್ದಾರೆ.

ADVERTISEMENT

ಕಾನ್ಸ್ (ಫ್ರಾನ್ಸ್), ಬರ್ಲಿನ್ (ಜರ್ಮನಿ, ವೆನಿಸ್ (ಇಟಲಿ), ಕಾರ್ಲೋವಿ ವೇರಿ (ಜೆಕ್‌ ರಿಪಬ್ಲಿಕ್, ಲೊಕಾರ್ನೂ (ಸಿಟ್ಟರ್ಲೆಂಡ್), ರಾಟರ್‌ಡ್ಯಾಮ್ (ನೆದರ್ ಲ್ಯಾಂಡ್), ಬೂಸಾನ್ (ದಕ್ಷಿಣ ಕೂರಿಯಾ), ಟೊರಂಟೋ (ಕೆನಡಾ) ದೇಶಗಳ ಚಿತ್ರೋತ್ಸವದಲ್ಲಿ ಭಾಗವಹಿಸಿ ಪ್ರಶಸ್ತಿ, ಮೆಚ್ಚುಗೆ ಪಡೆದ ಚಲನಚಿತ್ರಗಳು ಬೆಂಗಳೂರು ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ‘

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.