"NTRNeel"
ಬೆಂಗಳೂರು: ತೆಲುಗು ಸ್ಟಾರ್ ನಟ ಜೂನಿಯರ್ ಎನ್‌ಟಿಆರ್ ಮುಖ್ಯಪಾತ್ರದಲ್ಲಿರುವ ಪ್ರಶಾಂತ್ ನೀಲ್ ನಿರ್ದೇಶನದ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.
ಸದ್ಯ ಈ ಚಿತ್ರಕ್ಕೆ ತಾತ್ಕಾಲಿಕವಾಗಿ "NTRNeel" ಎಂದು ನಾಮಕರಣ ಮಾಡಲಾಗಿದೆ. 2026ರ ಜೂನ್ 25ರಂದು ಜಾಗತಿಕವಾಗಿ ಚಿತ್ರಮಂದಿರಗಳಲ್ಲಿ ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿಯಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಹೇಳಿದೆ.
ಈ ಚಿತ್ರವನ್ನು ಪುಷ್ಪ ಸಿನಿಮಾ ಖ್ಯಾತಿಯ ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣ ಮಾಡುತ್ತಿದೆ. ಮಾಸ್–ಕ್ಲಾಸ್–ಆಕ್ಷನ್‌ನ ದೊಡ್ಡ ಸ್ಪೋಟ ಮುಂದಿನ ವರ್ಷಕ್ಕೆ ಬರಲಿದೆ ಎಂದು ಮೇಕರ್ಸ್ ಹೇಳಿದ್ದಾರೆ.
ಕೆಜಿಎಫ್ ಖ್ಯಾತಿಯ ಪ್ರಶಾಂತ್ ನೀಲ್ ಅವರು ನಿರ್ದೇಶಿಸಿದ್ದ ಸಲಾರ್ ಅಷ್ಟೊಂದು ಹಿಟ್ ಆಗಲಿಲ್ಲ. ಜೂನಿಯರ್ ಎನ್‌ಟಿಆರ್ ಅವರೊಂದಿಗೆ ಪ್ರಶಾಂತ್ ನೀಲ್ ಅವರ ಈ ಹೊಸ ಚಿತ್ರ ತೀವ್ರ ನಿರೀಕ್ಷೆ ಹುಟ್ಟಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.