ADVERTISEMENT

ಹಬ್ಬದ ದಿನವೇ ಗಂಡು ಮಗುವಿಗೆ ಜನ್ಮ ನೀಡಿದ ಪ್ರೇರಣಾ: ಸಂಭ್ರಮದಲ್ಲಿ ಸರ್ಜಾ ಕುಟುಂಬ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ಸೆಪ್ಟೆಂಬರ್ 2023, 8:14 IST
Last Updated 18 ಸೆಪ್ಟೆಂಬರ್ 2023, 8:14 IST
<div class="paragraphs"><p>ನಟ ಧ್ರುವ ಸರ್ಜಾ,&nbsp;ಪ್ರೇರಣಾ</p></div>

ನಟ ಧ್ರುವ ಸರ್ಜಾ, ಪ್ರೇರಣಾ

   

ಆಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಮಗ ಜನಿಸಿದ ಖುಷಿಯಲ್ಲಿದ್ದಾರೆ. ಅವರ ಪತ್ನಿ ಪ್ರೇರಣಾ ಶಂಕರ್ ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಈ ಸುದ್ದಿಯನ್ನು ಧ್ರುವ ಸರ್ಜಾ, ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಗಣೇಶ ಹಬ್ಬದ ದಿನವೇ ಧ್ರುವ ಸರ್ಜಾ ಕುಟುಂಬಕ್ಕೆ ಗಂಡು ಮಗುವಿನ ಆಗಮನವಾಗಿದೆ.

ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಧ್ರುವ ಸರ್ಜಾಗೆ ಶುಭಾಶಯ ಕೋರುತ್ತಿದ್ದಾರೆ.

ಧ್ರುವ ಸರ್ಜಾ ಹಾಗೂ ಪ್ರೇರಣಾ 2019ರಲ್ಲಿ ಮದುವೆ ಆದರು. ಕಳೆದ ವರ್ಷ ಅಕ್ಟೋಬರ್​ 2ರಂದು ಧ್ರುವ ಸರ್ಜಾಗೆ ಹೆಣ್ಣು ಮಗು ಜನಿಸಿತು. 

ಸದ್ಯ ಧ್ರುವ ಸರ್ಜಾ ಮಾರ್ಟಿನ್ ಹಾಗೂ ಕೆ.ಡಿ ಚಿತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.