
ಪ್ರಿಯಾಂಕ ಉಪೇಂದ್ರ ನಾಯಕಿಯಾಗಿ ನಟಿಸಿರುವ ‘ಸೆಪ್ಟೆಂಬರ್ 21’ ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ. ಕರೆನ್ ಕ್ರಿಷ್ಟಿ ಸುವರ್ಣ ನಿರ್ದೇಶನದ ಚಿತ್ರ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಮುಗಿಸಿದ್ದು, ನವೆಂಬರ್ 20 ರಿಂದ 24 ರ ವರೆಗೆ ನಡೆಯಲಿರುವ 56ನೇ ಗೋವಾ ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಕೂಡ ಪ್ರದರ್ಶನಗೊಳ್ಳಲಿದೆ.
ಈ ಚಿತ್ರದಲ್ಲಿ ಪ್ರಿಯಾಂಕ ಉಪೇಂದ್ರ ಮೊದಲ ಬಾರಿಗೆ ಮಧ್ಯಮ ವರ್ಗದ ಮಹಿಳೆಯ ಪಾತ್ರ ಮಾಡಿದ್ದಾರೆ. ‘ಈ ಚಿತ್ರದಲ್ಲಿನ ಪಾತ್ರ ನನ್ನ ವೃತ್ತಿ ಜೀವನದ ಅತ್ಯಂತ ಸವಾಲಿನ ಪಾತ್ರವಾಗಿದ್ದು, ಅದನ್ನು ಅಷ್ಟೇ ಸೊಗಸಾಗಿ ಯುವ ನಿರ್ದೇಶಕಿ ಕಟ್ಟಿಕೊಟ್ಟಿದ್ದಾರೆ’ ಎಂದು ಪ್ರಿಯಾಂಕ ಉಪೇಂದ್ರ ಹೇಳಿದ್ದಾರೆ.
21ರ ಹರೆಯದ ಕರೆನ್ ಕ್ರಿಷ್ಟಿ ಅವರ ಚೊಚ್ಚಲ ನಿರ್ದೇಶನದ ಸಿನಿಮಾವಿದು. ಮುಖ್ಯ ಪಾತ್ರದಲ್ಲಿ ಪ್ರವೀಣ್ ಸಿಂಗ್ ಸಿಸೋಡಿಯಾ, ಝರಿನ ವಾಹಬ್, ಅಮಿತ್ ಬೇಲ್, ಅಜಿತ್ ಶಿದಾಯೆ, ಸಚಿನ್ ಪಾಟೇಕರ್ ನಟಿಸಿದ್ದಾರೆ.
ಆಲ್ಝೈಮರ್ ಕಾಯಿಲೆ ಸುತ್ತ ನಡೆಯುವ ಕಥೆ ಇದಾಗಿದ್ದು, ‘ರೋಗಿಗಿಂತ ಅವನ ಪಾಲನೆ ಮಾಡುವವರು ತೆಗೆದುಕೊಳ್ಳುವ ನಿರ್ಧಾರ ತುಂಬಾ ಮುಖ್ಯ’ ಎಂಬುದು ಚಿತ್ರದ ಅಡಿಬರಹವಾಗಿದೆ.
ರಾಜಶೇಖರ್ ಕಥೆ, ವಿನಯ್ ಚಂದ್ರ ಸಂಗೀತವಿದ್ದು, ಅನಿಲ್ ಕುಮಾರ್ ಛಾಯಾಚಿತ್ರಗ್ರಹಣವಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.