ಪುಷ್ಪ 2–ದಿ ರೂಲ್ ಚಿತ್ರದ ಪೋಸ್ಟರ್
(ಚಿತ್ರ ಕೃಪೆ–@alluarjun)
ಹೈದರಾಬಾದ್: ಕಾಲ್ತುಳಿತ ಪ್ರಕರಣದಲ್ಲಿ ಮೃತಪಟ್ಟ ಮಹಿಳೆಯ ಕುಟುಂಬಕ್ಕೆ ಪುಷ್ಪ–2 ಚಿತ್ರದ ನಿರ್ಮಾಪಕರು ₹50 ಲಕ್ಷ ಪರಿಹಾರ ನೀಡಿದ್ದಾರೆ.
ಮೃತ ಮಹಿಳೆಯ 8 ವರ್ಷದ ಮಗ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಭೇಟಿ ನೀಡಿದ ನಿರ್ಮಾಪಕ ನವೀನ್ ಯೆರ್ನೇನಿ ₹50 ಲಕ್ಷದ ಚೆಕ್ ಅನ್ನು ಕುಟುಂಬಕ್ಕೆ ಹಸ್ತಾಂತರಿಸಿದ್ದಾರೆ. ಅಲ್ಲದೆ, ಮೃತ ಮಹಿಳೆಗೆ ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ವರದಿಗಾರರ ಜೊತೆ ಮಾತನಾಡಿದ ಯೆರ್ನೇನಿ, ಸಹಾಯದ ನಿರೀಕ್ಷೆಯಲ್ಲಿದ್ದ ಮಹಿಳೆಯ ಕುಟುಂಬಕ್ಕೆ ಚೆಕ್ ಹಸ್ತಾಂತರಿಸಲಾಗಿದೆ ಎಂದು ಹೇಳಿದರು.
ಡಿಸೆಂಬರ್ 4ರಂದು ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಪುಷ್ಪ–2 ಪ್ರದರ್ಶನದ ವೇಳೆ ನಟ ಅಲ್ಲು ಅರ್ಜುನ್ ಆಗಮನದ ಬಳಿಕ ನೂಕುನುಗ್ಗಲು ಉಂಟಾಗಿ ಸಂಭವಿಸಿದ ಕಾಲ್ತುಳಿತದಲ್ಲಿ ರೇವತಿ ಎಂಬ ಮಹಿಳೆ ಮೃತಪಟ್ಟಿದ್ದರು. ಅವರ 8 ವರ್ಷದ ಮಗು ತೀವ್ರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದೆ.
ಪ್ರಕರಣ ಸಂಬಂಧ ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿತ್ತು. ಬಳಿಕ, ಹೈಕೋರ್ಟ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.
ಭಾನುವಾರ ಅಲ್ಲು ಅರ್ಜುನ್ ಅವರ ಮನೆಗೆ ನುಗ್ಗಿದ್ದ ಕೆಲ ಪ್ರತಿಭನಾಕಾರರು ಮೃತ ಮಹಿಳೆಯ ಕುಟುಂಬಕ್ಕೆ ₹1 ಕೋಟಿ ಪರಿಹಾರಕ್ಕೆ ಒತ್ತಾಯಿಸಿ, ಹೂಕುಂಡಗಳನ್ನು ಧ್ವಂಸ ಮಾಡಿ, ಕಲ್ಲು ಮತ್ತು ಮೊಟ್ಟೆಗಳನ್ನು ಎಸೆದು ಆಕ್ರೋಶ ವ್ಯಕ್ತಪಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.