
‘ರಥಾವರ’ ಸಿನಿಮಾ ನಿರ್ದೇಶಿಸಿದ್ದ ಚಂದ್ರಶೇಖರ್ ಬಂಡಿಯಪ್ಪ ಆ್ಯಕ್ಷನ್ ಕಟ್ ಹೇಳಿರುವ, ಪೃಥ್ವಿ ಅಂಬಾರ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ ‘ಚೌಕಿದಾರ್’ ಚಿತ್ರ ಬಿಡುಗಡೆಗೆ ಸಜ್ಜಾಗಿದ್ದು, ಸಿನಿಮಾದ ಮೂರನೇ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ.
ಅಪ್ಪ ಮಗನ ಬಾಂಧವ್ಯದ ಕುರಿತ ಈ ಸಿನಿಮಾದಲ್ಲಿ ಸಾಯಿಕುಮಾರ್ ಹಾಗೂ ಪೃಥ್ವಿ ಅಂಬಾರ್ ತಂದೆ–ಮಗನಾಗಿ ಜೊತೆಯಾಗಿದ್ದಾರೆ. ಪೃಥ್ವಿ ಅಂಬಾರ್ ಹಾಗೂ ಧನ್ಯಾ ರಾಮ್ಕುಮಾರ್ ಜೋಡಿಯಾಗಿ ನಟಿಸಿರುವ ಈ ಸಿನಿಮಾ ಫ್ಯಾಮಿಲಿ ಡ್ರಾಮಾ ಜಾನರ್‌ನಲ್ಲಿದೆ. ‘ಇಷ್ಟ ಆದೆ ನೀನು..’ ಎಂಬ ಹಾಡಿಗೆ ಪ್ರಮೋದ್ ಮರವಂತೆ ಸಾಹಿತ್ಯವಿದ್ದು, ಸಚಿನ್ ಬಸ್ರೂರ್ ಸಂಗೀತ ನೀಡಿದ್ದಾರೆ. ಹಾಡಿಗೆ ಪೃಥ್ವಿ ಭಟ್ ದನಿಯಾಗಿದ್ದಾರೆ. ಶ್ವೇತಾ, ಸುಧಾರಾಣಿ, ಧರ್ಮ, ‘ಬಿಗ್‌ಬಾಸ್’ ಖ್ಯಾತಿಯ ಗಿಲ್ಲಿ ನಟ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ. ವಿ.ಎಸ್.ಎಂಟರ್‌ಟೇನ್ಮೆಂಟ್ ಬ್ಯಾನರ್‌ನಡಿ ಕಲ್ಲಹಳ್ಳಿ ಚಂದ್ರಶೇಖರ್ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಬಿಡುಗಡೆಗೆ ಸಜ್ಜಾಗಿರುವ ಈ ಸಿನಿಮಾದ ಬಿಡುಗಡೆ ದಿನಾಂಕವನ್ನು ಖ್ಯಾತ ತಾರೆಯೊಬ್ಬರು ಶೀಘ್ರದಲ್ಲೇ ಘೋಷಣೆ ಮಾಡಲಿದ್ದಾರೆ ಎಂದು ಚಿತ್ರತಂಡ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.