ADVERTISEMENT

ಮೊದಲ ಸಂಬಳದಲ್ಲಿ ಅಪ್ಪುಗೆ ವಿಶೇಷ ಉಡುಗೊರೆ ಕೊಟ್ಟಿದ್ದ ಪತ್ನಿ ಅಶ್ವಿನಿ: ವಿಡಿಯೊ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಅಕ್ಟೋಬರ್ 2025, 7:10 IST
Last Updated 28 ಅಕ್ಟೋಬರ್ 2025, 7:10 IST
<div class="paragraphs"><p>ಅಶ್ವಿನಿ ಪುನೀತ್ ರಾಜ್‌ಕುಮಾರ್</p></div>

ಅಶ್ವಿನಿ ಪುನೀತ್ ರಾಜ್‌ಕುಮಾರ್

   

ಚಿತ್ರ: ಇನ್‌ಸ್ಟಾಗ್ರಾಮ್

ಅಶ್ವಿನಿ ಪುನೀತ್ ರಾಜಕುಮಾರ್ ಅವರು ತಮ್ಮ ಮೊದಲ ಸಂಬಳದಲ್ಲಿ ಅವರ ತಾಯಿಗೆ ಸೀರೆ ಹಾಗೂ ಅಪ್ಪುಗೆ ಜೋಡಿ ಗ್ಲಾಸ್‌ ಕೊಡಿಸಿದ್ದೆ ಎಂದು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

ADVERTISEMENT

ನಟ, ದಿವಂಗತ ಪುನೀತ್ ರಾಜಕುಮಾರ್ ಅವರು ನಿಧನರಾಗಿ ಅಕ್ಟೋಬರ್ 29ಕ್ಕೆ 4 ವರ್ಷ ಪೂರ್ಣಗೊಳ್ಳಲಿದೆ. ಅಪ್ಪು ಅವರ ನೆನಪು ಮಾತ್ರ ಅಭಿಮಾನಿಗಳ ಮನಸ್ಸಿನಲ್ಲಿ ಸದಾ ಜೀವಂತವಾಗಿದೆ. ಪುನೀತ್ ರಾಜ​ಕುಮಾರ್ ಅವರ ನೆನಪಿಗಾಗಿ ಪಿಆರ್‌ಕೆ ಆ್ಯಪ್ ಅನ್ನು ಅಧಿಕೃತವಾಗಿ ಲೋಕಾರ್ಪಣೆ ಮಾಡಲಾಗಿದೆ.

ಅದರ ಜೊತೆಗೆ ಪಿಆರ್‌ಕೆ ಸಾಮಾಜಿಕ ಮಾಧ್ಯಮದಲ್ಲಿ ಅಪ್ಪು ಬಗ್ಗೆ ಪತ್ನಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅವರು ಮನಬಿಚ್ಚಿ ಮಾತನಾಡಿದ್ದಾರೆ. ಪಿಆರ್‌ಕೆ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಪ್ರೊಮೋ ಬಿಡುಗಡೆ ಮಾಡಿದ್ದು, ಅದರಲ್ಲಿ ನಿರೂಪಕಿ ಅನುಶ್ರೀ ಜೊತೆಗಿನ ಸಂದರ್ಶನದಲ್ಲಿ ಅಶ್ವಿನಿ ಪುನೀತ್‌ ರಾಜಕುಮಾರ್‌ ಅವರು ಅಪ್ಪು ಜೀವನದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಅಶ್ವಿನಿ ತಮ್ಮ ಮೊದಲ ಸಂಬಳದಲ್ಲಿ ಅಪ್ಪುಗೆ ವಿಶೇಷ ಉಡುಗೊರೆ ಕೊಟ್ಟಿದ್ದರಂತೆ, ‘ನನಗೆ ಬಂದ ಮೊದಲ ಸಂಬಳದಲ್ಲಿ ಅಮ್ಮನಿಗೆ ಸೀರೆ ಕೊಡಿಸಿದ್ದೆ. ಅಪ್ಪುಗೆ ಜೋಡಿ ಗ್ಲಾಸ್‌ ಕೊಡಿಸಿದ್ದೆ. ಅಲ್ಲಿಂದ ನಮ್ಮ ಪಯಣ ಸಾಗಿತು’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.