ರಾಮನಗರ: ಬಿಡದಿ ಬಳಿ ಬೆಂಗಳೂರು-ಮೈಸೂರು ಹೆದ್ದಾರಿಗೆ ಹೊಂದಿಕೊಂಡಂತೆ ಪುನೀತ್ ರಾಜಕುಮಾರ್ ಅವರಿಗೆ ಸೇರಿದ ಫಾರ್ಮ್ ಹೌಸ್ ಇದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿದರು.
ದಶಕಗಳ ಹಿಂದೆಯೇ ರಾಜಕುಮಾರ್ ಕುಟುಂಬ ಇದನ್ನು ಖರೀದಿ ಮಾಡಿತ್ತು. ಪುನೀತ್ ಸಹ ಆಗಾಗ್ಗೆ ಇಲ್ಲಿಗೆ ಭೇಟಿ ನೀಡುತ್ತಿದ್ದರು. ಆದರೆ ಈಚಿನ ದಿನಗಳಲ್ಲಿ ತೋಟವನ್ನು ಸರಿಯಾಗಿ ನಿರ್ವಹಣೆ ಮಾಡದೇ ಹಾಗೆಯೇ ಬಿಡಲಾಗಿದೆ.
ಒಂದು ವೇಳೆ ಇಲ್ಲಿ ಅಂತ್ಯಕ್ರಿಯೆ ನಡೆಸಲು ಕುರಿತು ಕುಟುಂಬ ನಿರ್ಧರಿಸಿದಲ್ಲಿ ಅಗತ್ಯ ಸಿದ್ಧತೆ ಮತ್ತು ಕೈಗೊಳ್ಳಬೇಕಾದ ಸಿದ್ಧತೆಗಳ ಕುರಿತು ರಾಮನಗರ ಎಸ್ಪಿ ಗಿರೀಶ್ ಪರಿಶೀಲನೆ ನಡೆಸಿದರು. ಅಂತ್ಯಕ್ರಿಯೆ ಕುರಿತು ಈವರೆಗೆ ಯಾವುದೇ ಮಾಹಿತಿ ಬಂದಿಲ್ಲ ಎಂದು ಗಿರೀಶ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.