ADVERTISEMENT

ನಟ ಟೈಗರ್ ಶ್ರಾಫ್‌ಗೆ ಜೀವ ಬೆದರಿಕೆ: ಸುಳ್ಳು ಮಾಹಿತಿ ನೀಡಿದ್ದ ‌ವ್ಯಕ್ತಿ ಬಂಧನ

ಪಿಟಿಐ
Published 22 ಏಪ್ರಿಲ್ 2025, 9:49 IST
Last Updated 22 ಏಪ್ರಿಲ್ 2025, 9:49 IST
<div class="paragraphs"><p>ನಟ ಟೈಗರ್ ಶ್ರಾಫ್‌</p></div>

ನಟ ಟೈಗರ್ ಶ್ರಾಫ್‌

   

ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್ ಅವರಿಗೆ ಕೊಲೆ ಬೆದರಿಕೆ ಇದೆ ಎಂದು ಮುಂಬೈ ಪೊಲೀಸ್ ನಿಯಂತ್ರಣ ಕೊಠಡಿಗೆ ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಪಂಜಾಬ್ ಮೂಲದ 35 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಖಾರ್ ಪೊಲೀಸ್ ಠಾಣೆಯ ಅಧಿಕಾರಿಯ ಪ್ರಕಾರ, ಸೋಮವಾರ, ಮುಂಬೈ ಪೊಲೀಸ್ ನಿಯಂತ್ರಣ ಕೊಠಡಿಗೆ ಪಂಜಾಬ್‌ನಿಂದ ಕರೆ ಮಾಡಿದ್ದ ಮಾಣಿಕ್ ಕುಮಾರ್ ಸುಜಿಂದರ್ ಸಿಂಗ್ ಎಂಬ ವ್ಯಕ್ತಿ, ಟೈಗರ್ ಶ್ರಾಫ್ ಅವರ ಹತ್ಯೆಗೆ ಸುಪಾರಿ ನೀಡಲಾಗಿದ್ದು, ಕೆಲ ವ್ಯಕ್ತಿಗಳಿಗೆ ಆಯುಧ ಹಾಗೂ ₹2 ಲಕ್ಷ ನೀಡಲಾಗಿದೆ ಎಂದು ಹೇಳಿದ್ದ. ಅಲ್ಲದೇ ಕೆಲವು ಭದ್ರತಾ ಏಜೆನ್ಸಿಯವರಿಂದ ಟೈಗರ್ ಶ್ರಾಫ್ ಅವರನ್ನು ಕೊಲ್ಲಲು ಸಿದ್ಧತೆ ನಡೆಯುತ್ತಿದೆ ಎಂದೂ ಹೇಳಿದ್ದ.

ADVERTISEMENT

ಪ್ರಕರಣದ ತನಿಖೆ ನಡೆಸಿದ ಪೊಲೀಸರಿಗೆ ಸಿಂಗ್ ನೀಡಿದ್ದ ಮಾಹಿತಿ ಸುಳ್ಳು ಎಂದು ಗೊತ್ತಾಗಿದೆ. ಈ ಸಂಬಂಧ ಮುಂಬೈ ಪೊಲೀಸರು ಖಾರ್ ಉಪನಗರದಲ್ಲಿ ಪ್ರಕರಣ ದಾಖಲಿಸಿದ್ದು, ಪಂಜಾಬ್‌ನ ಅಧಿಕಾರಿಗಳ ಸಹಕಾರದಿಂದ ಆತನನ್ನು ಬಂಧಿಸಿದ್ದಾರೆ.

ಸದ್ಯ ಆರೋಪಿಯನ್ನು ಮುಂಬೈಗೆ ತರಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.