ADVERTISEMENT

ಸಿನಿ ಸುದ್ದಿ | ‘ಪಪ್ಪಿ’ ಸಿನಿಮಾ ತೆರೆಗೆ

​ಪ್ರಜಾವಾಣಿ ವಾರ್ತೆ
Published 2 ಮೇ 2025, 1:08 IST
Last Updated 2 ಮೇ 2025, 1:08 IST
ಪಪ್ಪಿ ಸಿನಿಮಾ 
ಪಪ್ಪಿ ಸಿನಿಮಾ    

‘ಫಸ್ಟ್‌ ಲವ್‌’ ಸಿನಿಮಾ ನಿರ್ದೇಶಿಸಿದ್ದ ಆಯುಷ್‌ ಮಲ್ಲಿ ನಿರ್ದೇಶನದ ‘ಪಪ್ಪಿ’ ಸಿನಿಮಾ ಗುರುವಾರ(ಮೇ 1) ತೆರೆಕಂಡಿದೆ. ಉತ್ತರ ಕರ್ನಾಟಕ ಭಾಷೆಯಲ್ಲಿರುವ ಈ ಸಿನಿಮಾವನ್ನು ನಟ ಧ್ರುವ ಸರ್ಜಾ ಪ್ರಸ್ತುತಪಡಿಸುತ್ತಿದ್ದಾರೆ.  

ಇಬ್ಬರು ಬಾಲಕರು ಹಾಗೂ ನಾಯಿ ಸುತ್ತ ಈ ಸಿನಿಮಾದ ಕಥೆ ಸಾಗುತ್ತದೆ. ಉತ್ತರ ಕರ್ನಾಟಕದ ಕಲಾವಿರಾದ ಜಗದೀಶ್ ಕೊಪ್ಪಳ, ಆದಿತ್ಯ ಸಿಂಧನೂರು, ಅದೃಷ್ಟ ಸಂಕನೂರು, ಋತ್ವಿಕ್ ಬಳ್ಳಾರಿ, ದುರ್ಗಪ್ಪ ಕಾಂಬ್ಳಿ, ರೇಣುಕಾ, ಆರಾವ ಲೋಹಿತ್ ನಾಗರಾಜ್ ಚಿತ್ರದಲ್ಲಿ ನಟಿಸಿದ್ದಾರೆ. ಶ್ರೀಧರ್ ಕಶ್ಯಪ್, ರವಿ ಬಿಲ್ಲೂರ್ ಚಿತ್ರಕ್ಕೆ ಸಂಗೀತ ನೀಡಿದ್ದು, ಬಿ. ಸುರೇಶ್‌ ಬಾಬು ಛಾಯಾಚಿತ್ರಗ್ರಹಣ ಸಿನಿಮಾಗಿದೆ. ಚಿತ್ರಕ್ಕೆ ಅಂದಪ್ಪ ಸಂಕನೂರು ಬಂಡವಾಳ ಹೂಡಿದ್ದಾರೆ. ಕೆಆರ್‌ಜಿ ಸ್ಟುಡಿಯೊಸ್‌ ‘ಪಪ್ಪಿ’ ಚಿತ್ರವನ್ನು ರಾಜ್ಯದಾದ್ಯಂತ ವಿತರಣೆ ಮಾಡುತ್ತಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT