ಚಿತ್ರದ ಪೋಸ್ಟರ್
ಇನ್‌ಸ್ಟಾಗ್ರಾಮ್
ಬೆಂಗಳೂರು: ರಾಜ್ಯದ ಹಲವು ಚಿತ್ರಮಂದಿರಗಳಲ್ಲಿ ತೆಲುಗಿನ ಪುಷ್ಪ-2 ಸಿನಿಮಾದ ಗುರುವಾರದ(ಡಿ.5) ಮುಂಜಾನೆಯ 4 ಗಂಟೆಯ ಪ್ರದರ್ಶನಗಳು ರದ್ದುಗೊಂಡವು.
ಕರ್ನಾಟಕ ಸಿನಿಮಾ ರೆಗ್ಯುಲೇಷನ್ ಕಾಯ್ದೆಯಡಿ ಬೆಳಗ್ಗೆ 6.30ರ ಮೊದಲು ಹಾಗೂ ರಾತ್ರಿ 10.30ರ ಸಿನಿಮಾ ಪ್ರದರ್ಶನಕ್ಕೆ ಅವಕಾಶವಿಲ್ಲ. ಈ ವಿಷಯವನ್ನು ಪ್ರಸ್ತಾಪಿಸಿ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಬೆಂಗಳೂರು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದರು. ಇದರ ಬೆನ್ನಲ್ಲೇ ನಿಯಮ ಉಲ್ಲಂಘಿಸುವ ಚಿತ್ರಮಂದಿರಗಳ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಬೆಂಗಳೂರು ನಗರ ಪೊಲೀಸ್ ಆಯುಕ್ತರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದ್ದರು. ಮುಂಜಾನೆ 6ಕ್ಕೂ ಮೊದಲು ಸಿನಿಮಾ ಪ್ರದರ್ಶನ ನೀಡುತ್ತಿರುವ 40ಕ್ಕೂ ಅಧಿಕ ಚಿತ್ರಮಂದಿರಗಳ ಹೆಸರನ್ನೂ ಪತ್ರದಲ್ಲಿ ಜಿಲ್ಲಾಧಿಕಾರಿಗಳು ಉಲ್ಲೇಖಿಸಿದ್ದರು.
ಈ ದೂರಿನ ಬೆನ್ನಲ್ಲೇ ಕರ್ನಾಟಕದಲ್ಲಿ 'ಪುಷ್ಪ-2' ಸಿನಿಮಾದ ಬುಧವಾರದ(ಡಿ.4) ಮಧ್ಯರಾತ್ರಿ ಹಾಗೂ ಗುರುವಾರ ಬೆಳಗಿನ (ಡಿ.5) ಪ್ರದರ್ಶನಗಳನ್ನು ರದ್ದುಗೊಳಿಸಲಾಗಿದೆ. ಈ ಬಗ್ಗೆ ಚಿತ್ರತಂಡವೇ ಅಧಿತೃತ ಮಾಹಿತಿ ನೀಡಿದ್ದು, ಜಿಲ್ಲಾಧಿಕಾರಗಳ ಆದೇಶದಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.