ಬೆಂಗಳೂರು: ತೆಲುಗಿನ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ' ಚಿತ್ರದ ಭಾಗ 2 ‘ಪುಷ್ಪ–ದಿ ರೂಲ್’ 2024 ಆಗಸ್ಟ್ 15ರಂದು ವಿಶ್ವದಾದ್ಯಂತ ತೆರೆಗೆ ಬರಲಿದೆ ಎಂದು ಅಧಿಕೃತವಾಗಿ ಚಿತ್ರತಂಡ ತಿಳಿಸಿತ್ತು. ಆದರೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಚಿತ್ರದ ಟೀಸರ್ ಬಿಡುಗಡೆ ದಿನಾಂಕವು ಹೆಚ್ಚು ಸದ್ದು ಮಾಡುತ್ತಿದೆ.
‘ಪುಷ್ಪ' ಚಿತ್ರದ ಭಾಗ 2 ‘ಪುಷ್ಪ–ದಿ ರೂಲ್’ ಟೀಸರ್ ಇದೇ ಏಪ್ರಿಲ್ 8ರಂದು ಬಿಡುಗಡೆಯಾಗಲಿದೆ.
ಟೀಸರ್ ಬಿಡುಗಡೆ ಸಂಬಂಧ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಅಲ್ಲು ಅರ್ಜುನ್ ಪೋಸ್ಟ್ ಹಂಚಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಅವರ ಅಭಿಮಾನಿಗಳಲ್ಲಿ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಅಲ್ಲು ಅಭಿಮಾನಿಗಳು ಚಿತ್ರದ ಸಂಬಂಧ ವಿವಿಧ ಪೋಸ್ಟ್‌ಗಳನ್ನು ಹಂಚಿಕೊಂಡು ನಟನ ಮೇಲಿನ ತಮ್ಮ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ.
ಚಿತ್ರಕ್ಕೆ ಸುಕುಮಾರ್ ಆ್ಯಕ್ಷನ್ ಕಟ್ ಹೇಳಿದ್ದು, ನವೀನ್ ಯರ್ನೇನಿ, ವೈ. ರವಿಶಂಕರ್ ನಿರ್ಮಿಸಿದ್ದಾರೆ.
ಪುಷ್ಪ-1 ಚಿತ್ರವು 2021ರ ಡಿಸೆಂಬರ್‌ನಲ್ಲಿ ತೆರೆಕಂಡಿತ್ತು. ಈ ಸಿನಿಮಾದ ಯಶಸ್ಸಿನಿಂದಾಗಿ ನಟ ಅಲ್ಲು ಅರ್ಜುನ್ ಅವರ ಖ್ಯಾತಿಯೂ ಮತ್ತಷ್ಟು ಹೆಚ್ಚಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.