ADVERTISEMENT

‘ಪ್ಯಾರ್‌’ ಸಿನಿಮಾದ ‘ಒಂದೇ ಮಾತಲಿ ಹೇಳೋದಾದರೆ’ ಹಾಡು ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 2 ಜನವರಿ 2026, 0:10 IST
Last Updated 2 ಜನವರಿ 2026, 0:10 IST
ರಾಶಿಕಾ, ರವಿಚಂದ್ರನ್‌, ರಿಶ್ವಿನ್‌
ರಾಶಿಕಾ, ರವಿಚಂದ್ರನ್‌, ರಿಶ್ವಿನ್‌   

ರವಿಚಂದ್ರನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ‘ಪ್ಯಾರ್‌’ ಚಿತ್ರದ ‘ಒಂದೇ ಮಾತಲಿ ಹೇಳೋದಾದರೆ’ ಹಾಡು ಇತ್ತೀಚೆಗಷ್ಟೇ ಬಿಡುಗಡೆಗೊಂಡು ಜನಮನ್ನಣೆ ಗಳಿಸುತ್ತಿದೆ. ಎಸ್.ಸುಪ್ರೀತ್ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ.

ಪಳನಿ ಡಿ.ಸೇನಾಪತಿ ಸಂಗೀತ, ಕೆ.ಎಸ್.ಚಂದ್ರಶೇಖರ್ ಛಾಯಾಚಿತ್ರಗ್ರಹಣದಲ್ಲಿ ಲಡಾಖ್‌ನ ರಮಣೀಯ ಪರಿಸರದಲ್ಲಿ ಈ ಹಾಡನ್ನು ಸೆರೆ ಹಿಡಿಯಲಾಗಿದೆ. ಶ್ರೇಯಾ ಘೋಷಾಲ್‌ ಹಾಡಿಗೆ ಧ್ವನಿಯಾಗಿದ್ದಾರೆ. ಎಸ್‌.ಎಂ.ಪ್ರೊಡಕ್ಷನ್ಸ್ ಲಾಂಛನದಲ್ಲಿ ಹೆಚ್.ಎಸ್. ನಾಗಶ್ರೀ ಬಂಡವಾಳ ಹೂಡಿದ್ದು, ರಿಶ್ವಿನ್‌ಗೆ ರಾಶಿಕಾ ಶೆಟ್ಟಿ ಜೋಡಿಯಾಗಿದ್ದಾರೆ.

‘ಪ್ರೀತಿ, ಪ್ರೇಮದ ಕಥೆಯ ಜತೆಗೆ ತಂದೆ ಮಗಳ ನಡುವಿನ ಭಾವನಾತ್ಮಕ ಸಂಬಂಧವನ್ನೂ ತೆರೆದಿಡುವಂಥ ಚಿತ್ರ. ರವಿಚಂದ್ರನ್‌ ನಾಯಕಿ ತಂದೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕಾಶ್ಮೀರ, ರಾಜಸ್ಥಾನ, ಅಂಡಮಾನ್ ಅಲ್ಲದೆ ಮಂಗಳೂರು, ಚಿಕ್ಕಮಗಳೂರು, ಮೈಸೂರು ಹಾಗೂ ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ಮಾಡಿದ್ದೇವೆ’ ಎಂದಿದ್ದಾರೆ ನಿರ್ದೇಶಕ. 

ADVERTISEMENT

ಚಿತ್ರದಲ್ಲಿ ಏಳು ಹಾಡುಗಳಿದ್ದು, ಸೋನು ನಿಗಮ್, ಕುನಾಲ್ ಗಾಂಜಾವಾಲಾ, ವಿಜಯಪ್ರಕಾಶ್, ರಾಜೇಶ್ ಕೃಷ್ಣನ್ ಹಾಗೂ ಪಲಕ್ ಮಚ್ಚಲ್ ಉಳಿದ ಹಾಡುಗಳನ್ನು ಹಾಡಿದ್ದಾರೆ. ಹಿರಿಯ ನಟ ಶ್ರೀನಿವಾಸಮೂರ್ತಿ, ವಿಜಯ ಸೂರ್ಯ, ಶಂಕರ್ ಅಶ್ವಥ್ ಮುಂತಾದವರು ಚಿತ್ರದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.