ADVERTISEMENT

‘ರಾಘು’ ಸಿನಿಮಾದಲ್ಲಿ ಚಿನ್ನಾರಿಮುತ್ತ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2022, 10:50 IST
Last Updated 4 ಡಿಸೆಂಬರ್ 2022, 10:50 IST
ರಾಘು ಚಿತ್ರದ ಪೋಸ್ಟರ್‌
ರಾಘು ಚಿತ್ರದ ಪೋಸ್ಟರ್‌   

ಯುವ ನಿರ್ದೇಶಕ ಎಂ. ಆನಂದ್ ರಾಜ್ ನಿರ್ದೇಶನದಲ್ಲಿ ವಿಜಯ ರಾಘವೇಂದ್ರ ನಟಿಸುತ್ತಿರುವ ಸಿನಿಮಾ ‘ರಾಘು’. ಫಸ್ಟ್ ಲುಕ್ ಮೂಲಕ ಗಮನ ಸೆಳೆದಿರುವ ಈ ಚಿತ್ರ ವಿಜಯ ರಾಘವೇಂದ್ರ ಅವರ ಸಿನಿ ಬದುಕಿನ ವಿಭಿನ್ನ ಸಿನಿಮಾ ಎಂದು ಚಿತ್ರತಂಡ ಹೇಳಿತ್ತು. ಇದೀಗ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ.

‘ರಾಘು’ ಸಿನಿಮಾ ಮೂಲಕ ವಿಜಯ ರಾಘವೇಂದ್ರ ತಮ್ಮನ್ನು ಹೊಸ ಪ್ರಯೋಗಕ್ಕೆ ಒಡ್ಡಿಕೊಂಡಿದ್ದಾರೆ. ಈ ಸಿನಿಮಾ ಸೋಲೋ ಆಕ್ಟಿಂಗ್ ಸಿನಿಮಾವಾಗಿದೆ. ಕನ್ನಡದ ಮಟ್ಟಿಗೆ ಇದೊಂದು ಹೊಸ ರೀತಿಯ ಪ್ರಯೋಗ. ಅಷ್ಟೇ ವಿಭಿನ್ನತೆಯನ್ನು ಸಿನಿಮಾ ಒಳಗೊಂಡಿದೆ. ಹೊಸ ರೀತಿಯ ಥ್ರಿಲ್ಲರ್ ಕಥಾಹಂದರ ಒಳಗೊಂಡ ಈ ಚಿತ್ರದಲ್ಲಿ ಪೂರ್ತಿ ಸಿನಿಮಾ ವಿಜಯ ರಾಘವೇಂದ್ರ ಒಬ್ಬರೇ ನಟಿಸಿದ್ದಾರೆ.

ಬಿ.ಆರ್.ನವೀನ್ ಕುಮಾರ್ ಅವರು ಚಿತ್ರಕ್ಕೆ ಹಿನ್ನೆಲೆ ಧ್ವನಿ ಪರಿಣಾಮ ನೀಡಿದ್ದಾರೆ. ಚಿತ್ರದ ಪೋಸ್ಟ್‌ ಪ್ರೊಡಕ್ಷನ್‌ ಮುಗಿದಿದೆ.ಡಿಕೆಎಸ್ ಸ್ಟುಡಿಯೋ, ಕೋಟಾ ಫಿಲಂ ಫ್ಯಾಕ್ಟರಿ ಪ್ರೊಡಕ್ಷನ್ ಹೌಸ್‌ ಅಡಿ ಸಿನಿಮಾ ನಿರ್ಮಾಣವಾಗಿದೆ. ರಣ್ವಿತ್ ಶಿವಕುಮಾರ್, ಅಭಿಷೇಕ್ ಕೋಟ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ವಿಜೇತ್ ಚಂದ್ರ ಸಂಕಲನ, ಉದಯ್ ಲೀಲಾ ಛಾಯಾಗ್ರಹಣವಿದೆ. ಹಾಡುಗಳಿಗೆ ಸೂರಜ್ ಜೋಯಿಸ್ ಸಂಗೀತ ಸಂಯೋಜನೆ ಮಾಡಿದ್ದಾರೆ. ರಿತ್ವಿಕ್ ಮುರಳಿಧರ್ ಹಿನ್ನೆಲೆ ಸಂಗೀತ ಚಿತ್ರಕ್ಕಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.