ADVERTISEMENT

ಯೂಟ್ಯೂಬ್‌ನಲ್ಲಿ 'ಸ್ವೀಟಿ ನನ್ನ ಜೋಡಿ'; ನಟಿ ರಾಧಿಕಾ ದೂರು

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2020, 20:08 IST
Last Updated 1 ಸೆಪ್ಟೆಂಬರ್ 2020, 20:08 IST
ರಾಧಿಕಾ ಕುಮಾರಸ್ವಾಮಿ
ರಾಧಿಕಾ ಕುಮಾರಸ್ವಾಮಿ   

ಬೆಂಗಳೂರು: ನಿರ್ಮಾಪಕರ ಅನುಮತಿ ಪಡೆಯದೇ 'ಸ್ವೀಟಿ ನನ್ನ ಜೋಡಿ' ಸಿನಿಮಾವನ್ನು ಯೂಟ್ಯೂಬ್‌ಗೆ ಅಪ್‌ಲೋಡ್ ಮಾಡಲಾಗಿದ್ದು, ಈ ಸಂಬಂಧ ನಿರ್ಮಾಪಕಿಯೂ ಆಗಿರುವ ನಟಿ ರಾಧಿಕಾ ಕುಮಾರಸ್ವಾಮಿ ಅವರು ಉತ್ತರ ವಿಭಾಗದ ಸೈಬರ್ ಠಾಣೆಗೆ ದೂರು ನೀಡಿದ್ದಾರೆ.

'ಸಿನಿಮಾ ಪೈರಸಿ ಮಾಡಿರುವ ಕಿಡಿಗೇಡಿಗಳ ವಿರುದ್ದ ಕ್ರಮ ಜರುಗಿಸಬೇಕು' ಎಂದು ಅವರು ದೂರಿನಲ್ಲಿ ಒತ್ತಾಯಿಸಿದ್ದಾರೆ.

‘2013ರಲ್ಲಿ ರಾಧಿಕಾ ಕುಮಾರಸ್ವಾಮಿ ಅವರೇ ‘ಸ್ವೀಟಿ ನನ್ನ ಜೋಡಿ’ ಸಿನಿಮಾ ನಿರ್ಮಿಸಿದ್ದರು. ತಾವೇ ನಟಿಸಿದ್ದರು. ಅದೇ ಸಿನಿಮಾವನ್ನು ನಿರ್ಮಾಪಕರ ಅನುಮತಿ ಪಡೆಯದೇ ಯೂಟ್ಯೂಬ್‌ಗೆ ಅಪ್‌ಲೋಡ್ ಮಾಡಲಾಗಿದೆ’ ಎಂದು ಸೈಬರ್ ಕ್ರೈಂ ಪೊಲೀಸರು ಹೇಳಿದರು.

ADVERTISEMENT

‘₹3 ಕೋಟಿ ವೆಚ್ಚದಲ್ಲಿ ಸಿನಿಮಾ ನಿರ್ಮಿಸಿರುವುದಾಗಿ ರಾಧಿಕಾ ಕುಮಾರಸ್ವಾಮಿ ದೂರಿನಲ್ಲಿ ಹೇಳಿದ್ದಾರೆ. ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದೂ ತಿಳಿಸಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.