ADVERTISEMENT

ರಾಘವೇಂದ್ರ ರಾಜಕುಮಾರ್ ಅಭಿನಯದ ‘ರಾಜತಂತ್ರ’ ಬಿಡುಗಡೆಗೆ ಸಿದ್ಧ

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2020, 19:30 IST
Last Updated 13 ಡಿಸೆಂಬರ್ 2020, 19:30 IST
ರಾಘವೇಂದ್ರ ರಾಜ್‌ಕುಮಾರ್‌
ರಾಘವೇಂದ್ರ ರಾಜ್‌ಕುಮಾರ್‌   

ವಿಶ್ವಂ ಡಿಜಿಟಲ್ ಮೀಡಿಯಾ ಪ್ರೈ. ಲಿ. ಲಾಂಛನದಲ್ಲಿ ಜೆ.ಎಂ.ಪ್ರಹ್ಲಾದ್, ವಿಜಯ್ ಭಾಸ್ಕರ್ ಹರಪನಹಳ್ಳಿ ಹಾಗೂ ಪಿ.ಆರ್.ಶ್ರೀಧರ್ ಅವರು ನಿರ್ಮಿಸಿರುವ, ರಾಜ್ಯ ಪ್ರಶಸ್ತಿ ವಿಜೇತ ನಟ ರಾಘವೇಂದ್ರ ರಾಜಕುಮಾರ್ ಪ್ರಧಾನ ಪಾತ್ರದಲ್ಲಿ ಅಭಿನಯಿಸಿರುವ ರಾಜತಂತ್ರ ಚಿತ್ರ ಬಿಡುಗಡೆಗೆ ಸಿದ್ದವಾಗಿದೆ. ಚಿತ್ರ ವೀಕ್ಷಿಸಿದ ಸೆನ್ಸಾರ್ ಮಂಡಳಿ ಯು/ಎ ಪತ್ರ ನೀಡಿದೆ.

ಪಿ.ವಿ.ಆರ್ ಸ್ವಾಮಿ ಗೊಗರದೊಡ್ಡಿ ನಿರ್ದೇಶನದ ಈ ಸಿನಿಮಾಕ್ಕೆ ಜೆ.ಎಂ.ಪ್ರಹ್ಲಾದ್ ಕಥೆ, ಚಿತ್ರಕಥೆ, ಸಂಭಾಷಣೆ ಹಾಗೂ ಸಾಹಿತ್ಯ ಬರೆದಿದ್ದಾರೆ.

ಶ್ರೀಸುರೇಶ್ ಸಂಗೀತ ನಿರ್ದೇಶನ, ಪಿ.ವಿ.ಆರ್ ಸ್ವಾಮಿ ಛಾಯಾಗ್ರಹಣ, ನಾಗೇಶ್ ಸಂಕಲನ, ಚಂದನ್ ಕಲಾ ನಿರ್ದೇಶನ ಹಾಗೂ ವೈಲೆಂಟ್ ವೇಲು, ರಾಮ್ ದೇವ್, ಅಲ್ಟಿಮೆಟ್ ಶಿವು ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ADVERTISEMENT

ರಾಘವೇಂದ್ರ ರಾಜಕುಮಾರ್, ದೊಡ್ಡಣ್ಣ, ಶ್ರೀನಿವಾಸ ಮೂರ್ತಿ, ಭವ್ಯ, ಶಂಕರ್ ಅಶ್ವಥ್, ನೀನಾಸಂ ಅಶ್ವಥ್, ಮುನಿರಾಜು, ವಿಜಯಭಾಸ್ಕರ್, ಪ್ರತಾಪ್ ಸಿಂಹ ಅಗರ, ಶಿವಾನಂದ, ಪ್ರಕಾಶ್ ಕಾರಿಯಪ್ಪ, ವೆಂಕಟೇಶ್ ಪ್ರಸಾದ್, ಹೋಳಿ‌ ವೆಂಕಟೇಶ್, ಸ್ವಾತಿ ಅಂಬರೀಶ್, ವಲ್ಲಭ್, ಪ್ರವೀಣ್, ಉಮೇಶ್, ಕುಮಾರ್, ಕನ್ನಡ ಪ್ರೇಮ್, ಲಕ್ಷ್ಮಣ್, ಭೀಮ, ಆನಂದ್ ಪನ್ನೇದೊಡ್ಡಿ, ಹೇರಂಭ, ಸತೀಶ್ ಗೌಡ, ಮೀರಾಶ್ರೀ ಗೌಡ ಚಿತ್ರದಲ್ಲಿ ನಟಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.