ADVERTISEMENT

‘ಬಿಂಗೊ’ ರಾಗಿಣಿ ಬಂದರು ದಾರಿಬಿಡಿ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2023, 10:29 IST
Last Updated 7 ಮಾರ್ಚ್ 2023, 10:29 IST
ರಾಗಿಣಿ ದ್ವಿವೇದಿ
ರಾಗಿಣಿ ದ್ವಿವೇದಿ   

‘ಬಿಂಗೋ’ ಎನ್ನುತ್ತಾ ಬಂದಿದ್ದಾರೆ ರಾಗಿಣಿ ದ್ವಿವೇದಿ. ಆರ್‌.ಕೆ. ಚಂದನ್‌ ರಾಗಿಣಿಗೆ ನಾಯಕ. ಈಗ ಮೂರನೇ ಹಂತದ ಚಿತ್ರೀಕರಣ ಬೆಂಗಳೂರಿನ ದೇವರಾಜ ಎಸ್ಟೇಟ್‌ನಲ್ಲಿ ನಡೆದಿದೆ. ರಾಗಿಣಿ ಅವರು ಎರಡು ಶೇಡ್‌ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆರ್.ಕೆ. ಸ್ಟುಡಿಯೋಸ್ ಮತ್ತು ಮುತರಾ ವೆಂಚರ್ಸ್ ಲಾಂಛನದಲ್ಲಿ ಲಲಿತಾಸ್ವಾಮಿ ಮತ್ತು ಆರ್. ಪರಾಂಕುಶ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಶಂಕರ್ ಕೋನಮಾನಹಳ್ಳಿ ಚಿತ್ರದ ನಿರ್ದೇಶಕರು. ರಕ್ಷಾ ನಿಂಬರ್ಗಿ (ಇನ್ನೊಬ್ಬರು ನಾಯಕಿ), ರಾಜೇಶ್ ನಟರಂಗ, ಪವನ್(ಮಜಾ ಟಾಕೀಸ್), ಮುರಳಿ ಪೂರ್ವಿಕ್, ಅಪೂರ್ವಾ, ಆಶಾ ಸುಜಯ್, ಶ್ರವಣ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಈ ಚಿತ್ರದಲ್ಲಿ ರಾಗಿಣಿ ದ್ವಿವೇದಿ ಅವರು ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಎರಡು ಶೇಡ್‌ಗಳಲ್ಲಿ ಅವರ ಪಾತ್ರವಿರುತ್ತದೆ. ಚಿತ್ರಕ್ಕೆ ಹಿತನ್ ಹಾಸನ್ ಸಂಗೀತ ನಿರ್ದೇಶನವಿದೆ. ನಟರಾಜ್ ಮುದ್ದಾಲ್ ಅವರ ಛಾಯಾಗ್ರಹಣವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT