ADVERTISEMENT

ಶಾನುಭೋಗರ ಮಗಳಾಗಿ ರಾಗಿಣಿ ಪ್ರಜ್ವಲ್‌

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2022, 19:30 IST
Last Updated 8 ಸೆಪ್ಟೆಂಬರ್ 2022, 19:30 IST
ರಾಗಿಣಿ ಪ್ರಜ್ವಲ್‌
ರಾಗಿಣಿ ಪ್ರಜ್ವಲ್‌   

ಅತಿ ಹೆಚ್ಚು ಕಾದಂಬರಿ ಆಧಾರಿತ ಚಿತ್ರಗಳಿಗೆ ಆ್ಯಕ್ಷನ್‌ ಕಟ್‌ ಹೇಳಿರುವ ನಿರ್ದೇಶಕ ಕೋಡ್ಲು ರಾಮಕೃಷ್ಣ ಅವರು ಇದೀಗ ಮತ್ತೊಂದು ಕಾದಂಬರಿ ಆಧಾರಿತ ಸಿನಿಮಾ ನಿರ್ಮಾಣಕ್ಕೆ ಸಜ್ಜಾಗಿದ್ದಾರೆ.

ಭಾಗ್ಯ ಕೃಷ್ಣಮೂರ್ತಿ ಅವರ ಕಾದಂಬರಿ ‘ಶಾನುಭೋಗರ ಮಗಳು’ ಆಧಾರಿತ ಚಿತ್ರದ ಚಿತ್ರೀಕರಣ ಶೀಘ್ರದಲ್ಲೇ ಆರಂಭವಾಗಲಿದ್ದು, ಪ್ರಮುಖ ಪಾತ್ರದಲ್ಲಿ ನಟಿ ರಾಗಿಣಿ ಪ್ರಜ್ವಲ್‌ ನಟಿಸಲಿದ್ದಾರೆ.ಭುವನ್ ಫಿಲಂಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದ್ದು, ಚಿತ್ರಕ್ಕೆ ಬಿ.ಎ.ಮಧು ಚಿತ್ರಕಥೆ ಹಾಗೂ ಸಂಭಾಷಣೆ ಬರೆಯುತ್ತಿದ್ದಾರೆ. ಚಿತ್ರಕ್ಕೆ ಜೈ ಆನಂದ್ ಛಾಯಾಗ್ರಹಣ, ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ ಹಾಗೂ ವಸಂತ್ ರಾವ್ ಕುಲಕರ್ಣಿ ಅವರ ಕಲಾ ನಿರ್ದೇಶನವಿರಲಿದೆ.

ಮೇಘಶ್ರೀ, ನಿರಂಜನ್ ಕುಮಾರ್, ರಮೇಶ್ ಭಟ್, ಟೆನ್ನಿಸ್ ಕೃಷ್ಣ, ‌ಶಂಕರ್ ಅಶ್ವತ್ಥ್ , ನೀನಾಸಂ ಅಶ್ವತ್ಥ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಈ ಚಿತ್ರದಲ್ಲಿ ಟಿಪ್ಪು ಸುಲ್ತಾನ್ ಪ್ರಮುಖ ಪಾತ್ರವಾಗಿದ್ದು, ಆ ಪಾತ್ರಕ್ಕಾಗಿ ಆಯ್ಕೆ ಕಾರ್ಯ ನಡೆಯುತ್ತಿದೆ. ಸೆಪ್ಟೆಂಬರ್ ಕೊನೆಯ ವಾರದಿಂದ ಮೈಸೂರು, ಶ್ರೀರಂಗಪಟ್ಟಣ, ಮೇಲುಕೋಟೆ ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ ಎಂದಿದೆ ಚಿತ್ರತಂಡ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.