
ರಾಜ್ ಬಿ ಶೆಟ್ಟಿ ನಾಯಕ ನಟನಾಗಿರುವ ‘ರಕ್ಕಸಪುರದೋಳ್’ ಚಿತ್ರದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ರವಿ ಸಾರಂಗ ನಿರ್ದೇಶನದ ಚೊಚ್ಚಲ ಸಿನಿಮಾದಲ್ಲಿ ರಾಜ್ ಶೆಟ್ಟಿ ಮಾಸ್ ಅವತಾರದಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ. ಸಾಹಸ ನಿರ್ದೇಶಕ ರವಿವರ್ಮ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.
‘ಕೊಳ್ಳೇಗಾಲವನ್ನು ಆಧರಿಸಿದ ಕ್ರೈಮ್ ಥ್ರಿಲ್ಲರ್ ಕಥೆ ಇದು. ಜತೆಗೆ ಮನುಷ್ಯನ ಒಳಗಿನ ದೈತ್ಯನ ಬಗೆಗಿನ ಕಥೆ ಕೂಡ. ಪ್ರತಿಯೊಬ್ಬ ವ್ಯಕ್ತಿಗೂ ಎರಡು ಮುಖಗಳಿರುತ್ತವೆ. ಒಂದು ಒಳ್ಳೆಯದು ಮತ್ತು ಇನ್ನೊಂದು ಕೆಟ್ಟದ್ದು. ಆ ಕತ್ತಲೆಯೇ ರಕ್ಕಸ. ಮುಖ್ಯ ಪಾತ್ರವು ತನ್ನ ಆಂತರಿಕ ಹೋರಾಟಗಳನ್ನು ಹೇಗೆ ಎದುರಿಸುತ್ತದೆ ಎಂಬುದನ್ನು ಈ ಚಿತ್ರವು ಹೇಳುತ್ತದೆ’ ಎನ್ನುತ್ತಾರೆ ನಿರ್ದೇಶಕ.
‘ಗರುಡ ಗಮನ’, ‘ಟೋಬಿ’ ಚಿತ್ರಗಳ ಬಳಿಕ ರಾಜ್ ಮತ್ತೆ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಪೊಲೀಸ್ ಅಧಿಕಾರಿಯಾಗಿ ದುಷ್ಟರನ್ನು ಸಂಹಾರ ಮಾಡುವ ಪಾತ್ರ ಇವರದ್ದು ಎಂದು ಟೀಸರ್‌ನಿಂದ ಗೊತ್ತಾಗುತ್ತದೆ.
2026 ಫೆಬ್ರುವರಿ 6ಕ್ಕೆ ಚಿತ್ರ ತೆರೆಗೆ ಬರಲಿದೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ, ವಿಲಿಯಂ ಡೇವಿಡ್ ಛಾಯಾಚಿತ್ರಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನವಿದೆ. ಸ್ವತಿಷ್ಠ ಕೃಷ್ಣನ್, ಗೋಪಾಲಕೃಷ್ಣ ದೇಶಪಾಂಡೆ, ಬಿ.ಸುರೇಶ್, ಅರ್ಚನಾ ಕೊಟ್ಟಿಗೆ ಮುಂತಾದವರು ಚಿತ್ರದಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.