

ರಾಜ್.ಬಿ. ಶೆಟ್ಟಿ ನಟನೆಯ ‘ರಕ್ಕಸಪುರದೋಳ್’ ಚಿತ್ರವು ಫೆ. 6ರಂದು ಬಿಡುಗಡೆಯಾಗಲಿದೆ. ಈ ಕುರಿತು ಸಾಮಾಜಿಕ ಮಾಧ್ಯಮ ಇನ್ಸ್ಟಾಗ್ರಾಮ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ .

ಕೆಲ ದಿನಗಳ ಹಿಂದೆ ‘ರಕ್ಕಸಪುರದೋಳ್’ ಚಿತ್ರದ ಟ್ರೇಲರ್ ಬಿಡುಗಡೆಯಾಗಿ ಪ್ರೇಕ್ಷಕರ ಗಮನ ಸೆಳೆದಿತ್ತು. ಇನ್ನೂ ಈ ಸಿನಿಮಾದಲ್ಲಿ ‘ರಾಜ್ ಬಿ. ಶೆಟ್ಟಿ ಅವರು ಪೊಲೀಸ್ ಪಾತ್ರದಲ್ಲಿ ನಟಿಸಿದ್ದಾರೆ. ಕ್ರೈಮ್, ಸಸ್ಪೆನ್ಸ್ ಥ್ರಿಲ್ಲರ್ ಕಥೆ ಹೊಂದಿದೆ ಎಂದು ಮೇಲ್ನೋಟಕ್ಕೆ ಕಾಣುತ್ತಿದೆ.
‘ಒಂದು ಸರಳ ಪ್ರೇಮ ಕಥೆ’ ಚಿತ್ರದ ಮೂಲಕ ಗಮನ ಸೆಳೆದ ನಟಿ ಸ್ವತಿಷ್ಠ ಕೃಷ್ಣನ್ ಅವರು ಈ ಚಿತ್ರದಲ್ಲಿ ನಟಿಸಿದ್ದಾರೆ.
ಈ ಚಿತ್ರವನ್ನು ರವಿ ಸಾರಂಗ ಅವರು ನಿರ್ದೇಶಿಸುತ್ತಿದ್ದು, ಡಾ. ಕೆ. ರವಿವರ್ಮ ಆ್ಯಕ್ಷನ್ ಕಟ್ ಹೇಳಿದ್ದಾರೆ. ಅರ್ಜುನ್ ಜನ್ಯ ಅವರು ಸಂಗೀತ ಸಂಯೋಜಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.