ನಟ ರಾಜ್ ಬಿ.ಶೆಟ್ಟಿ
ಕನ್ನಡದ ಖ್ಯಾತ ನಟ ರಾಜ್ ಬಿ.ಶೆಟ್ಟಿ ನಟನೆಯ, ರವಿ ಸಾರಂಗ ನಿರ್ದೇಶನದ 'ರಕ್ಕಸಪುರದೋಳ್' ಸಿನಿಮಾದ ಟ್ರೇಲರ್ ಇಂದು (ಜ.29) ‘ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಿದೆ.
ನಿರ್ದೇಶಕ ರವಿ ಸಾರಂಗ ಅವರ ಚೊಚ್ಚಲ ನಿರ್ದೇಶನದಲ್ಲಿ ಮೂಡಿಬಂದಿರುವ ರಕ್ಕಸಪುರದೋಳ್ ಸಿನಿಮಾ ಫೆ.6 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.
ನಟ ರಾಜ್ ಬಿ. ಶೆಟ್ಟಿ ಅವರು ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. 2025ರ ಹಿಟ್ ಸಿನಿಮಾವಾದ ‘ಸು ಫ್ರಮ್ ಸೋ’ ನಲ್ಲಿ ವಿಭಿನ್ನ ಪಾತ್ರದ ಮೂಲಕ ಅಭಿಮಾನಿಗಳ ಮನಸ್ಸು ಗೆದ್ದಿದ್ದರು. ಅಲ್ಲದೆ ಇತ್ತೀಚೆಗೆ ಬಿಡುಗಡೆಯಾದ ‘45’ ಸಿನಿಮಾದಲ್ಲಿಯೂ ವಿಭಿನ್ನ ಪಾತ್ರದಲ್ಲಿ ರಾಜ್ ಬಿ. ಶೆಟ್ಟಿ ಕಾಣಿಸಿಕೊಂಡಿದ್ದರು.
'ರಕ್ಕಸಪುರದೋಳ್' ಸಿನಿಮಾದಲ್ಲಿ ರಾಜ್ ಬಿ. ಶೆಟ್ಟಿ ಅವರು ಪೊಲೀಸ್ ಪಾತ್ರದಲ್ಲಿ ನಟಿಸಿದ್ದಾರೆ. ಡಾ. ಕೆ. ರವಿವರ್ಮ ಆ್ಯಕ್ಷನ್ ಕಟ್ ಹೇಳಿದ್ದು, ಅರ್ಜುನ್ ಜನ್ಯ ಸಂಗೀತವಿದೆ. ಸಿನಿಮಾದ ಚಿತ್ರೀಕರಣವು ಮಳವಳ್ಳಿ, ಚಾಮರಾಜನಗರ ಸುತ್ತಮುತ್ತಲಿನ ಹಳ್ಳಿಗಳಲ್ಲಿ ನಡೆದಿದೆ ಎಂದು ಚಿತ್ರ ತಂಡ ತಿಳಿಸಿದೆ.
ಇದೇ ಮೊದಲ ಬಾರಿಗೆ ಈ ಸಿನಿಮಾ ಮೂಲಕ ಪೊಲೀಸ್ ಪಾತ್ರದಲ್ಲಿ ರಾಜ್ ಬಿ.ಶೆಟ್ಟಿ ಕಾಣಿಸಿಕೊಳ್ಳಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.