
ರಜನಿ ಕಾಂತ್–ಕಮಲ್ ಹಾಸನ್
ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಉಳಗನಾಯಗನ್ ಕಮಲ್ ಹಾಸನ್ ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ತಲೈವಾ ಅವರ 173ನೇ ಸಿನಿಮಾ ಘೋಷಣೆಯಾಗಿದೆ. ಈ ಚಿತ್ರವನ್ನು ಕಮಲ್ ಹಾಸನ್ ನಿರ್ಮಾಣ ಮಾಡುತ್ತಿದ್ದಾರೆ.
ಕಮಲ್ ಹಾಸನ್ ತಮ್ಮದೇ ನಿರ್ಮಾಣ ಸಂಸ್ಥೆಯಾದ ರಾಜ್ ಕಮಲ್ ಫಿಲ್ಮ್ ಇಂಟರ್‌ನ್ಯಾಷನಲ್ ಕಂಪನಿ ಮೂಲಕ ರಜನಿಕಾಂತ್ ಅವರ 173ನೇ ಚಿತ್ರ ನಿರ್ಮಾಣ ಮಾಡಲಿದ್ದಾರೆ.
ನಿರ್ದೇಶಕ ಯಾರು?
ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ ಹಾಗೂ ಖುಷ್ಬೂ ಸುಂದರ್ ಅವರ ಪತಿ ಸಿ. ಸುಂದರ್ ಅವರು ರಜನಿಕಾಂತ್ ಅವರ 173ನೇ ಚಿತ್ರ ನಿರ್ದೇಶನ ಮಾಡಲಿದ್ದಾರೆ. ರಜನಿಗೆ ಅರುಣಾಚಲಂ ಎಂಬ ಸೂಪರ್ ಹಿಟ್ ಚಿತ್ರ ಕೊಟ್ಟಿರುವ ಇವರು, ಕಮಲ್ ಹಾಸನ್‌ಗೆ ಅನ್ಬೆ ಶಿವಂ ಎಂಬ ಚಿತ್ರ ನಿರ್ದೇಶನ ಮಾಡಿದ್ದಾರೆ.
ರಜನಿಕಾಂತ್ ಅವರ 173ನೇ ಸಿನಿಮಾ ತಂಡ
ಯಾವಾಗ ರಿಲೀಸ್
ಸಿ. ಸುಂದರ್ ನಿರ್ದೇಶನ ಮಾಡಲಿರುವ, ಕಮಲ್ ಹಾಸನ್ ನಿರ್ಮಾಣದ, ರಜನಿ ಕಾಂತ್ ನಟಿಸಲಿರುವ ಈ ಸಿನಿಮಾವನ್ನು 2027ರ ಪೊಂಗಲ್ ಹಬ್ಬಕ್ಕೆ ಬಿಡುಗಡೆ ಮಾಡಲು ಚಿತ್ರತಂಡ ಪ್ಲಾನ್ ಮಾಡಿಕೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.