
ತಮಿಳು ಚಿತ್ರರಂಗದ ಸೂಪರ್‌ಸ್ಟಾರ್ ನಟ ರಜನಿಕಾಂತ್ ಅವರ 75ನೇ ವರ್ಷದ ಜನ್ಮದಿನ ಹಾಗೂ ಅವರು ಚಿತ್ರರಂಗಕ್ಕೆ ಕಾಲಿಟ್ಟು 50 ವರ್ಷಗಳು ಪೂರ್ಣಗೊಂಡಿರುವುದರಿಂದ ಪ್ರಧಾನಿ ನರೇಂದ್ರ ಮೋದಿಯವರು ತಮಿಳಿನಲ್ಲಿಯೇ ರಜನಿಕಾಂತ್ ಅವರಿಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ.
ಕನ್ನಡ, ತಮಿಳು, ತೆಲುಗು, ಹಿಂದಿ ಸೇರಿದಂತೆ ಅನೇಕ ಭಾಷೆಗಳು ಸುಮಾರು 170ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ರಜನಿಕಾಂತ್ ಅವರು ಇಂದು (ಶುಕ್ರವಾರ) ತಮ್ಮ ಜನ್ಮದಿನವನ್ನು ಆಚರಿಸಿಕೊಂಡಿದ್ದಾರೆ. ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ತಮಿಳು ಭಾಷೆಯಲ್ಲೇ ಶುಭಾಶಯ ಕೋರಿದ್ದಾರೆ.
‘75ನೇ ವರ್ಷದ ಹುಟ್ಟುಹಬ್ಬದ ವಿಶೇಷ ಕ್ಷಣದಲ್ಲಿರುವ ರಜನಿಕಾಂತ್ ಅವರಿಗೆ ಶುಭಾಶಯಗಳು. ಅವರ ಅಭಿನಯ ಹಲವು ತಲೆಮಾರುಗಳನ್ನು ಆವರಿಸಿದೆ. ವ್ಯಾಪಕವಾದ ಮೆಚ್ಚುಗೆ ಪಡೆದುಕೊಂಡಿದೆ. ಅವರ ಚಿತ್ರಕಥೆಗಳು ವಿವಿಧ ಪಾತ್ರಗಳು ಮತ್ತು ನಟನಾ ಶೈಲಿ ಅನೇಕರಿಗೆ ಸ್ಫೂರ್ತಿ ನೀಡಿದೆ. ಚಲನಚಿತ್ರ ಜಗತ್ತಿನಲ್ಲಿ ಅವರು 50 ವರ್ಷಗಳನ್ನು ಪೂರ್ಣಗೊಳಿಸಿರುವುದು ಕೂಡ ಗಮನಾರ್ಹ ಸಂಗತಿ. ಅವರು ದೀರ್ಘಕಾಲ ಆರೋಗ್ಯಕರ ಜೀವನ ನಡೆಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಶುಭಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.