
ಪ್ರಜಾವಾಣಿ ವಾರ್ತೆ
ಡಾ. ರಾಜಕುಮಾರ್
ಚಾಮರಾಜನಗರ: ವರನಟ ಡಾ.ರಾಜಕುಮಾರ್ ಅವರ ಸಹೋದರಿ ನಾಗಮ್ಮ (94 ವರ್ಷ) ತಮಿಳುನಾಡಿನ ತಾಳವಾಡಿ ತಾಲ್ಲೂಕಿನ ದೊಡ್ಡ ಗಾಜನೂರಿನಲ್ಲಿ ಶುಕ್ರವಾರ ನಿಧನರಾದರು.
ಮೃತರಿಗೆ ಐವರು ಪುತ್ರರು, ಮೂವರು ಪುತ್ರಿಯರು ಇದ್ದಾರೆ.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ನಾಗಮ್ಮನವರು ಕುಟುಂಬದ ಸದಸ್ಯರೊಟ್ಟಿಗೆ ತೋಟದ ಮನೆಯಲ್ಲಿ ಉಳಿದುಕೊಂಡಿದ್ದರು.
ಮೃತರ ಅಂತ್ಯಕ್ರಿಯೆ ಶನಿವಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.