ADVERTISEMENT

ಕ್ವಾರಂಟೈನ್‌ನಲ್ಲಿ ‘ರಾಖಿ ಭಾಯ್‌’ ಯಶ್‌

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2020, 7:33 IST
Last Updated 25 ಡಿಸೆಂಬರ್ 2020, 7:33 IST
ಕೆಜಿಎಫ್‌ ಚಾಪ್ಟರ್‌ 2 ಚಿತ್ರದಲ್ಲಿ ಯಶ್‌
ಕೆಜಿಎಫ್‌ ಚಾಪ್ಟರ್‌ 2 ಚಿತ್ರದಲ್ಲಿ ಯಶ್‌   

‘ಕೆಜಿಎಫ್ ಚಾಪ್ಟರ್ 2’ ಚಿತ್ರದ ಶೂಟಿಂಗ್ ಮುಗಿಸಿ ಹೈದರಾಬಾದ್‌ನಿಂದ ಬೆಂಗಳೂರಿಗೆ ವಾಪಸ್‌ ಆಗಿರುವ‘ರಾಖಿ ಭಾಯ್‌’ ಯಶ್‌, ಕೊರೊನಾ ಸೋಂಕಿನ ಭೀತಿಯಿಂದ ಸ್ವಯಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.

ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ತಕ್ಷಣ ಕೊರೊನೊ ಪರೀಕ್ಷೆ ಮಾಡಿಸಿಕೊಂಡ ಯಶ್‌, ತಮ್ಮ ಕುಟುಂಬ ಮತ್ತು ಸ್ನೀಹಿತರ ಹಿತದೃಷ್ಟಿಯಿಂದ ಹೋಟೆಲ್‌ನಲ್ಲಿ ಕ್ವಾರಂಟೈನ್‌ನಲ್ಲಿದ್ದಾರೆ.

ಯಶ್ ಅವರು ತಮ್ಮ ಪತ್ನಿ ರಾಧಿಕಾ ಪಂಡಿತ್ ಮತ್ತು ಮಕ್ಕಳಾದ ಐರಾ ಮತ್ತು ಯಥರ್ವ್ ಅವರಿಂದ ಎರಡು ವಾರಗಳ ಕಾಲ ದೂರದಲ್ಲಿ ಇರಲಿದ್ದಾರೆ. ಕ್ವಾರಂಟೈನ್‌ ಅವಧಿ ಮುಗಿಯುವವರೆಗೆ ಅವರು ಯಾರನ್ನೂ ಭೇಟಿ ಮಾಡದಿರಲು ನಿರ್ಧರಿಸಿದ್ದಾರೆ ಎಂದು ಯಶ್‌ ಆಪ್ತರು ‘ಪ್ರಜಾಪ್ಲಸ್‌’ಗೆ ತಿಳಿಸಿದ್ದಾರೆ.

ADVERTISEMENT

ಮಂಗಳೂರಿನಲ್ಲಿ ಚಿತ್ರೀಕರಣ ಪೂರ್ಣಗೊಳಿಸಿ, ಹೈದರಾಬಾದ್‌ಗೆ ತೆರಳಿದ್ದ ಚಿತ್ರತಂಡ ಶನಿವಾರವಷ್ಟೇ ಕೊನೆ ಹಂತದ ಚಿತ್ರೀಕರಣ ಪೂರ್ಣಗೊಳಿಸಿ, ಗ್ರೂಫ್‌ ಫೋಟೊ ಕೂಡ ತೆಗೆಸಿಕೊಂಡಿತ್ತು.

ಪ್ರಶಾಂತ್‌ ನೀಲ್‌ ನಿರ್ದೇಶನ ಮತ್ತು ಹೊಂಬಾಳೆ ಫಿಲಂಸ್‌ ಬ್ಯಾನರ್‌ನಡಿ ವಿಜಯ್‌ ಕಿರಗಂದೂರು ನಿರ್ಮಾಣದ ಕೆಜಿಎಫ್‌ ಚಾಪ್ಟರ್‌ ಚಿತ್ರದಲ್ಲಿ ಯಶ್‌ ‘ರಾಖಿ ಭಾಯ್‌’ ಪಾತ್ರದಲ್ಲಿ ನಟಿಸಿದ್ದಾರೆ.

‘ಅಧೀರ’ನ ಪಾತ್ರದಲ್ಲಿ ಬಾಲಿವುಡ್‌ ನಟ ಸಂಜಯ್‌ ದತ್‌, ರಮಿಕಾ ಸೇನ್‌ ಪಾತ್ರದಲ್ಲಿ ರವಿನಾ ಟಂಡನ್‌, ನಾಯಕಿಯಾಗಿ ರೀನಾ ಪಾತ್ರದಲ್ಲಿ ಶ್ರೀನಿಧಿ ಶೆಟ್ಟಿ, ಪ್ರಕಾಶ್‌ ರೈ, ಮಾಳವಿಕಾ ಅವಿನಾಶ್‌, ಬಿ.ಸುರೇಶ್‌, ಯಶ್‌ ಶೆಟ್ಟಿ, ಅರ್ಚನಾ ಜೋಯಿಷ್‌, ಅಯ್ಯಪ್ಪ ಪಿ.ಶರ್ಮ ಇನ್ನಿತರರು ಕಾಣಿಸಿಕೊಂಡಿದ್ದಾರೆ.

ಜನವರಿ 8ರಂದು ಯಶ್‌ ಹುಟ್ಟುಹಬ್ಬ ಇರುವುದರಿಂದ ಅಂದು ಚಿತ್ರದ ಟೀಸರ್‌ ಬಿಡುಗಡೆ ಮಾಡುವುದಾಗಿ ಈಗಾಗಲೇ ಚಿತ್ರತಂಡ ದಿನಾಂಕವನ್ನೂ ಪ್ರಕಟಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.