ADVERTISEMENT

ನಾವು ಯಾವಾಗಲೂ ಒಟ್ಟಿಗೆ ಇರಲಿದ್ದೇವೆ: ಸುಶಾಂತ್‌ ಸಹೋದರಿಯ ರಕ್ಷಾ ಬಂಧನದ ಶುಭಾಶಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 22 ಆಗಸ್ಟ್ 2021, 8:05 IST
Last Updated 22 ಆಗಸ್ಟ್ 2021, 8:05 IST
ಸುಶಾಂತ್‌ ಸಿಂಗ್‌ ರಜಪೂತ್‌ ಮತ್ತು ಶ್ವೇತಾ ಸಿಂಗ್ ಕೀರ್ತಿ
ಸುಶಾಂತ್‌ ಸಿಂಗ್‌ ರಜಪೂತ್‌ ಮತ್ತು ಶ್ವೇತಾ ಸಿಂಗ್ ಕೀರ್ತಿ   

ರಕ್ಷಾ ಬಂಧನದ ಹಿನ್ನೆಲೆಯಲ್ಲಿ ನಟ ಸುಶಾಂತ್‌ ಸಿಂಗ್‌ ರಜಪೂತ್‌ ಜೊತೆಗಿರುವ ಬಾಲ್ಯದ ಫೋಟೊವನ್ನು ಅವರ ಸಹೋದರಿ ಶ್ವೇತಾ ಸಿಂಗ್ ಕೀರ್ತಿ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ.

'ನಾವು ಯಾವಾಗಲೂ ಒಟ್ಟಿಗೆ ಇರಲಿದ್ದೇವೆ. ಲವ್‌ ಯು ಸಹೋದರ' ಎಂದು ಶ್ವೇತಾ ಬರೆದುಕೊಂಡಿದ್ದಾರೆ.

ಜೂನ್ 14ರಂದು ಮುಂಬೈನ ಬಾಂದ್ರಾದ ತಮ್ಮ ನಿವಾಸದಲ್ಲಿ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣ ದೇಶದ ಗಮನ ಸೆಳೆದಿತ್ತು. ನಂತರ ಈ ಸಾವಿನ ಪ್ರಕರಣ ಹಲವು ತಿರುವು ಪಡೆದುಕೊಂಡಿತ್ತು.

ADVERTISEMENT

ಶ್ವೇತಾ ಸಿಂಗ್ ಕೀರ್ತಿ ಅವರು ಕಳೆದ ವರ್ಷ ಪ್ರಧಾನಿ ಮೋದಿಯವರಿಗೆ ಪತ್ರ ಬರೆದು, ‘ಸುಶಾಂತ್‌ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತನಿಖೆ ನಡೆಸಿ, ನಮಗೆ ನ್ಯಾಯಕೊಡಿಸಿ‘ ಎಂದು ಮನವಿ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.