ADVERTISEMENT

ನಾನು ಹೇಳಿದ್ದು ಸಿನಿಮಾ ಸಂಭಾಷಣೆ; ಚಾಮುಂಡೇಶ್ವರಿ ನನ್ನ ಪರಮ ದೈವ: ರಕ್ಷಕ್ ಬುಲೆಟ್

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2025, 11:17 IST
Last Updated 27 ಮಾರ್ಚ್ 2025, 11:17 IST
<div class="paragraphs"><p>ರಕ್ಷಕ್‌</p></div>

ರಕ್ಷಕ್‌

   

ಬೆಂಗಳೂರು: ಚಾಮುಂಡೇಶ್ವರಿ ದೇವಿಗೆ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ, ನಟ ರಕ್ಷಕ್‌ ‘ಬುಲೆಟ್‌’ ವಿರುದ್ಧ  ಹಿಂದೂ ಸಂಘಟನೆ ಕಾರ್ಯಕರ್ತ ಬಿ.ಎಸ್‌.ಮಹೇಶ್‌ ಅವರು ನಗರ ಪೊಲೀಸ್‌ ಕಮಿಷನರ್ ಬಿ.ದಯಾನಂದ ಅವರಿಗೆ ದೂರು ನೀಡಿದ ಬೆನ್ನಲ್ಲೇ, ರಕ್ಷಕ್‌ ಕ್ಷಮೆಯಾಚಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಹಂಚಿಕೊಂಡು, ‘ನಾನು ನಿಮ್ಮ ರಕ್ಷಕ್ ಬುಲೆಟ್, ಇತ್ತೀಚಿಗೆ ಒಂದು ರಿಯಾಲಿಟಿ ಶೋನಲ್ಲಿ ನಾನು ಒಂದು ಹೆಸರಾಂತ ಚಿತ್ರದ ಡೈಲಾಗನ್ನು ಒಂದು ಸ್ಕಿಟ್ ನಲ್ಲಿ ಹೇಳಿದ್ದೆ, ಅದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ನನ್ನ ತಂದೆಯವರಾದ ದಿವಂಗತ ಬುಲೆಟ್ ಪ್ರಕಾಶ್ ಅವರು, ನನ್ನ ತಾಯಿಯವರು ಹಾಗೂ ಎಲ್ಲಾ ನಮ್ಮ ಕುಟುಂಬದವರು ಪರಮ ದೈವ ಭಕ್ತರು, ನಮ್ಮ ತಂದೆಯವರ ಕಾಲದಿಂದಲೂ ನಾವು ತಾಯಿ ಚಾಮುಂಡೇಶ್ವರಿಗೆ ಪೂಜೆ ಮಾಡುತ್ತಾ ನಡೆದುಕೊಂಡು ಬಂದಿದ್ದೇವೆ, ನಾನು ಉದ್ದೇಶಪೂರ್ವಕವಾಗಿ ತಾಯಿ ಚಾಮುಂಡೇಶ್ವರಿಯ ಕುರಿತು ಹೇಳುವಷ್ಟು ದೊಡ್ಡವನಲ್ಲ, ಆ ತಾಯಿಯ ಆಶೀರ್ವಾದದಿಂದ ನಾನು ಬೆಳೆಯುತ್ತಿದ್ದೇನೆ. ನಾನು ಯಾವುದೇ ಕಾರ್ಯ ಪ್ರಾರಂಭಿಸಬೇಕಾದರೆ ಮೊದಲು ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ನಂತರ ಕೆಲಸವನ್ನು ಪ್ರಾರಂಭ ಮಾಡುತ್ತೇನೆ. ನಾನು ಭಕ್ತಾದಿಗಳ ಭಾವನೆಗಳಿಗಾಗಲಿ ಮನಸ್ಸಿಗಾಗಲಿ ನೋವನ್ನು ಉಂಟು ಮಾಡುವ ಕೆಲಸ ಮಾಡುವುದಿಲ್ಲ. ಯಾರಿಗಾದರೂ ಬೇಸರವಾಗಿದ್ದಲ್ಲಿ ನಾನು ಕ್ಷಮೆಯಾಚಿಸುತ್ತೇನೆ. ಮುಂದೆ ಇಂತಹ ಅಚಾತುರ್ಯ ನಡೆಯುವುದಿಲ್ಲ’ ಎಂದು ಬರೆದುಕೊಂಡಿದ್ದಾರೆ.

ADVERTISEMENT

‘ನಟ ರಕ್ಷಕ್‌ ‘ಬುಲೆಟ್‌’, ಜೀ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ ‘ಭರ್ಜರಿ ಬ್ಯಾಚುಲರ್ಸ್‌–2’ ಕಾರ್ಯಕ್ರಮದ ನಿರ್ದೇಶಕ ಹಾಗೂ ಬರಹಗಾರರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು’ ಎಂದೂ ಮಹೇಶ್‌ ಅವರು ದೂರಿನಲ್ಲಿ ಕೋರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.