ADVERTISEMENT

ಜಾಮೀನು ರಹಿತ ವಾರಂಟ್: ರಕ್ಷಿತ್ ಶೆಟ್ಟಿ ಹೇಳಿದ್ದೇನು?

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2020, 6:14 IST
Last Updated 26 ಫೆಬ್ರುವರಿ 2020, 6:14 IST
   
""

ಬೆಂಗಳೂರು: ಕಾಪಿರೈಟ್‌ ಉಲ್ಲಂಘಿಸಿ ‘ಕಿರಿಕ್‌ ಪಾರ್ಟಿ’ ಚಿತ್ರದಲ್ಲಿ ಹಾಡು ಬಳಸಿದ ಆರೋಪ ಸಂಬಂಧ ನಟ ರಕ್ಷಿತ್ ಶೆಟ್ಟಿವಿರುದ್ಧ ಕೋರ್ಟ್ ಜಾಮೀನು ರಹಿತ ವಾರಂಟ್ ಹೊರಡಿಸಿರುವುದಕ್ಕೆ ಟ್ವೀಟ್‌ ಮೂಲಕ ರಕ್ಷಿತ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ರಕ್ಷಿತ್ ಶೆಟ್ಟಿ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ಈಗಾಗಲೇಸಿವಿಲ್ ಮತ್ತು ಹೈ ಕೋರ್ಟ್‌ನಲ್ಲಿ ಈ ಕೇಸ್ ಅನ್ನು ಗೆದ್ದಿದೇವೆ. ಮತ್ತೆ ಅದೇ ಪ್ರಕರಣದ ಮೇಲೆ ಇನ್ನೊಂದು ಕೇಸ್‌ ದಾಖಲಿಸುವುದರಿಂದ ಯಾವ ಪ್ರಯೋಜನವಿದೆ? 6 ತಿಂಗಳ ಹಿಂದೆ ಎರಡನೇ ಪ್ರಕರಣ ದಾಖಲಿಸಿದ್ದ ನಮಗೂ ನಮ್ಮ ವಕೀಲರಿಗೂ ಮಾಹಿತಿ ನೀಡಿಲ್ಲ ಯಾಕೆ ಎಂದು ರಕ್ಷಿತ್‌ ಶೆಟ್ಟಿ ಪ್ರಶ್ನೆ ಮಾಡಿದ್ದಾರೆ.

ಮುಂದುವರೆದು ಮತ್ತೊಂದು ಟ್ವೀಟ್‌ ಮಾಡಿರುವ ರಕ್ಷಿತ್ ಶೆಟ್ಟಿ, ನಾವು ಮತ್ತೆ ಕಾನೂನು ಹೋರಾಟ ಮಾಡಲು ನಿರ್ಧರಿಸಿದ್ದೇವೆ. ಆಗ ನಮ್ಮಸಿನಿಮಾ ಬಿಡುಗಡೆಗೆ ಕಷ್ಟವಾಗಿತ್ತು. ಕೊನೆಯ ಕ್ಷಣದಲ್ಲಿ ಹಾಡನ್ನು ಕತ್ತರಿಸಿ ಚಿತ್ರವನ್ನು ಬಿಡುಗಡೆ ಮಾಡಲಾಯಿತು ಎಂದು ರಕ್ಷಿತ್ ಶೆಟ್ಟಿ ಮತ್ತೊಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

ADVERTISEMENT

ಲಹರಿ ಸಂಸ್ಥೆಯು ಎರಡನೇ ಪ್ರಕರಣ ದಾಖಲಿಸಿರುವ ಸಂಬಂಧ ರಕ್ಷಿತ್‌ ಶೆಟ್ಟಿ ಮತ್ತು ತಂಡ ನ್ಯಾಯಾಲಯಕ್ಕೆ ಹಾಜರಾಗದೇ ಇರುವುದಕ್ಕೆ ನ್ಯಾಯಾಲಯ ಜಾಮೀನು ರಹಿತ ವಾರಂಟ್‌ ಹೊರಡಿಸಿದೆ.

ಪ್ರಕರಣದ ಹಿನ್ನೆಲೆ:2016ರ ಡಿಸೆಂಬರ್ 30ರಂದು ಬಿಡುಗಡೆ ಆದ ಕಿರಿಕ್ ಪಾರ್ಟಿ ಚಿತ್ರದಲ್ಲಿ ಹೇಯ್‌ ಹೂ ಆರ್‌ ಯೂ (Hey who are you) ಹಾಡನ್ನು ಲಹರಿ ಸಂಸ್ಥೆಯ ಅನುಮತಿ ಇಲ್ಲದೆ ಬಳಸಲಾಗಿತ್ತು.‘ಶಾಂತಿ ಕ್ರಾಂತಿ’ ಚಿತ್ರದ ಹಾಡನ್ನು ಚಿತ್ರದಲ್ಲಿ ಬಳಸಿಕೊಂಡಿದ್ದರಿಂದ ಲಹರಿ ಸಂಸ್ಥೆ 2017ರ ಜನವರಿ 11ರಂದು ದೂರು ದಾಖಲಿಸಿತ್ತು.

ಲಹರಿ ಆಡಿಯೋ ಸಂಸ್ಥೆ ಕಾಪಿ ರೈಟ್ ಕಾಯ್ದೆ ಅಡಿ ರಕ್ಷಿತ್ ಶೆಟ್ಟಿ , ಪರಮವ್ಹಾಸ್ಟುಡಿಯೋ ಪ್ರೈವೇಟ್ಲಿಮಿಟೆಡ್ ಹಾಗೂ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ವಿರುದ್ಧ ಪ್ರಕರಣ ದಾಖಲಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.