ನಟ ರಕ್ಷಿತ್ ಶೆಟ್ಟಿ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ‘777 ಚಾರ್ಲಿ’ಯ ಮೊದಲ ವಿಡಿಯೊ ಹಾಡು ‘ಟಾರ್ಚರ್’ ಇದೇ 9ರಂದು ಬಿಡುಗಡೆಯಾಗಲಿದೆ.
ಈ ಕುರಿತು ಟ್ವೀಟ್‌ನಲ್ಲಿ ಮಾಹಿತಿ ನೀಡಿರುವ ಚಿತ್ರದ ನಿರ್ದೇಶಕ ಕಿರಣ್ ರಾಜ್ ಕೆ., ‘ಕನ್ನಡ, ಮಲಯಾಳಂ, ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ವಿಡಿಯೊ ಹಾಡು ಬಿಡುಗಡೆಯಾಗಲಿದೆ. ಧರ್ಮ ಮತ್ತು ಚಾರ್ಲಿ ನಡುವೆ ನಡೆಯಲಿರುವ ಟಾಮ್ ಆ್ಯಂಡ್ ಜೆರಿ ಆಟವನ್ನು ನೋಡಲು ಸಿದ್ಧವಾಗಿರಿ’ ಎಂದು ಉಲ್ಲೇಖಿಸಿದ್ದಾರೆ.
‘777ಚಾರ್ಲಿ’ ಚಿತ್ರವನ್ನು ಜಿ.ಎಸ್.ಗುಪ್ತ ಹಾಗೂ ರಕ್ಷಿತ್ ಶೆಟ್ಟಿ ನಿರ್ಮಾಣ ಮಾಡಿದ್ದು, ಸಂಗೀತಾ ಶೃಂಗೇರಿ ಚಿತ್ರದ ನಾಯಕಿ. ನಟ, ನಿರ್ದೇಶಕ ರಾಜ್ ಬಿ.ಶೆಟ್ಟಿ, ಡ್ಯಾನಿಶ್ ಸೇಟ್ ಚಿತ್ರದ ತಾರಾಗಣದಲ್ಲಿದ್ದಾರೆ.ಅಕ್ಟೋಬರ್–ನವೆಂಬರ್‌ನಲ್ಲಿ ಚಿತ್ರದ ಬಿಡುಗಡೆಗೆ ಚಿತ್ರತಂಡ ಸಿದ್ಧತೆ ನಡೆಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.