
'ಪೆದ್ದಿ' ಚಿತ್ರದ ಪೋಸ್ಟರ್
ಬೆಂಗಳೂರು: ಬುಚ್ಚಿಬಾಬು ಸನಾ ನಿರ್ದೇಶನದ, ತೆಲುಗು ನಟ ರಾಮ್‌ಚರಣ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ ಪೆದ್ದಿ ಏಪ್ರಿಲ್ 30ರಂದು ಬಿಡುಗಡೆಯಾಗಲಿದೆ.
ಈ ಸಂಬಂಧ ಇನ್‌ಸ್ಟಾಗ್ರಾಮ್‌ನಲ್ಲಿ ನಟ ರಾಮ್‌ಚರಣ್ ಪೋಸ್ಟರ್ ಹಂಚಿಕೊಂಡು ಮಾಹಿತಿ ನೀಡಿದ್ದಾರೆ.
ಪೆದ್ದಿ ಚಿತ್ರ ಮಾರ್ಚ್ 27ಕ್ಕೆ ಬಿಡುಗಡೆಯಾಗಬೇಕಿತ್ತು. ಆದರೆ ಕಾರಣಾಂತರಗಳಿಂದ ಸಿನಿಮಾ ಬಿಡುಗಡೆ ಮುಂದೂಡಲಾಗಿದೆ ಎಂದು ಚಿತ್ರತಂಡ ತಿಳಿಸಿದೆ.
ಚಿತ್ರ ಬಿಡುಗಡೆ ದಿನಾಂಕದಲ್ಲಿ ಬದಲಾವಣೆ ಇರಬಹುದು, ಆದರೆ ಆತನ (ರಾಮ್‌ಚರಣ್) ಧೈರ್ಯ, ಸಾಹಸಗಳಲ್ಲಿ ಬದಲಾವಣೆ ಇಲ್ಲ ಎಂದು ನಿರ್ದೇಶಕ ಬುಚ್ಚಿಬಾಬು ಸನಾ ಇನ್‌ಸ್ಟಾಗ್ರಾಮ್ ಪೋಸ್ಟರ್‌ನಲ್ಲಿ ಬರೆದುಕೊಂಡಿದ್ದಾರೆ.
ಪೆದ್ದಿ ಸಿನಿಮಾದಲ್ಲಿ ರಾಮ್ ಚರಣ್ ರಗಡ್ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚರಣ್‌ಗೆ ಜೋಡಿಯಾಗಿ ಬಾಲಿವುಡ್ ನಟಿ ಜಾಹ್ನವಿ ಕಪೂರ್ ಅಭಿನಯಿಸಿದ್ದಾರೆ.
ಈ ಚಿತ್ರ ಕ್ರೀಡೆ ಆ್ಯಕ್ಷನ್ ಡ್ರಾಮಾ ಕಥಾಹಂದರ ಹೊಂದಿದೆ. ನಟ ಶಿವರಾಜ್‌ಕುಮಾರ್, ಜಗಪತಿ ಬಾಬು ಮತ್ತು ದಿವೇಂದು ಶರ್ಮಾ ಪ್ರಮುಖ ಪಾತ್ರಗಳಲ್ಲಿ ನಟಿಸಲಿದ್ದಾರೆ.
ಚಿತ್ರಕ್ಕೆ ವೆಂಕಟ ಸತೀಶ್ ಕಿಲಾರು ಬಂಡವಾಳ ಹೂಡಿದ್ದಾರೆ. ಚಿತ್ರಕ್ಕೆ ಎ.ಆರ್. ರೆಹಮಾನ್ ಸಂಗೀತ, ಆರ್. ರತ್ನವೇಲು ಛಾಯಾಚಿತ್ರಗ್ರಹಣವಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.