
ರಾಮ್ ಚರಣ್ ತೇಜ್ ಕುಟುಂಬ
ಚಿತ್ರ: ಇನ್‌ಸ್ಟಾಗ್ರಾಂ
ಮೆಗಾ ಸ್ಟಾರ್ ಚಿರಂಜೀವಿ ಮನೆಯಲ್ಲಿ ಡಬಲ್ ಸಂಭ್ರಮ ಮನೆ ಮಾಡಿದೆ. ಟಾಲಿವುಡ್ ಜನಪ್ರಿಯ ನಟ ರಾಮ್ ಚರಣ್ ಪತ್ನಿ ಉಪಾಸನಾ ಕೊನಿಡೆಲಾ ಅವರು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಅವರಿಗೆ ಒಂದು ಹೆಣ್ಣು ಹಾಗೂ ಒಂದು ಗಂಡು ಮಗು ಜನಿಸಿದೆ.
ಈ ಮೊದಲು 2023ರಲ್ಲಿ ಈ ದಂಪತಿಗೆ ಹೆಣ್ಣು ಮಗು ಜನಿಸಿತ್ತು. ಮಗಳಿಗೆ ಕ್ಲಿನ್ ಕಾರಾ ಎಂದು ನಾಮಕರಣ ಮಾಡಿದ್ದರು. ಈಗ ರಾಮ್ ಚರಣ್ ಅವಳಿ ಮಕ್ಕಳಿಗೆ ತಂದೆಯಾಗಿದ್ದಾರೆ. ಈ ಬಗ್ಗೆ ರಾಮ್ ಚರಣ್ ತಂದೆ ಮೆಗಾ ಸ್ಟಾರ್ ಚಿರಂಜೀವಿ ಅವರು ಮಾಹಿತಿ ನೀಡಿದ್ದಾರೆ.
ಇನ್‌ಸ್ಟಾಗ್ರಾಂ ಖಾತೆಯಲ್ಲಿ ‘ರಾಮ್ ಚರಣ್ ಮತ್ತು ಉಪಾಸನಾ ಅವರಿಗೆ ಅವಳಿ ಮಕ್ಕಳು ಜನಿಸಿವೆ ಎಂಬುದನ್ನು ತಿಳಿಸಲು ಬಹಳ ಸಂತೋಷ ಆಗುತ್ತಿದೆ. ತಾಯಿ ಮತ್ತು ಮಕ್ಕಳು ಆರೋಗ್ಯವಾಗಿದ್ದಾರೆ. ಅಜ್ಜ-ಅಜ್ಜಿ ಆದ ನಮಗೆ ಈ ಮಕ್ಕಳನ್ನು ಕುಟುಂಬಕ್ಕೆ ಸ್ವಾಗತಿಸುವುದು ಅತ್ಯಂತ ಖುಷಿಯ ಕ್ಷಣವಾಗಿದೆ’ ಎಂದಿದ್ದಾರೆ. ಜೊತೆಗೆ ‘ಎಲ್ಲರ ಪ್ರೀತಿ, ಆಶೀರ್ವಾದ, ಶುಭ ಹಾರೈಕೆ ಮತ್ತು ಪ್ರಾರ್ಥನೆಗಳಿಗಾಗಿ ನಾವು ಧನ್ಯವಾದ ಅರ್ಪಿಸುತ್ತೇವೆ’ ಎನ್ನುತ್ತ ಕಮೆಂಟ್ ಮಾಡಿರುವ ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳಿಗೆ ಅಭಿನಂದನೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.