
ಹೊಸ ವರ್ಷವನ್ನು ಬರಮಾಡಿಕೊಳ್ಳಲು ಯುವ ಜನತೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಬೆಂಗಳೂರಿನಲ್ಲಿ ಸಕಲ ಸಿದ್ಧತೆಗಳು ಆರಂಭಗೊಂಡಿವೆ. ಇದರ ಜೊತೆಗೆ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಬೆಂಗಳೂರು ಪೊಲೀಸರು ನಗರದಾದ್ಯಂತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದಾರೆ.
ಇದೀಗ ಚಲನಚಿತ್ರ ನಟ ರಮೇಶ್ ಅರವಿಂದ್ ಅವರು, ಹೊಸ ವರ್ಷದ ಆಚರಣೆಗಳಿಗೆ ಸಂಬಂಧಿಸಿದ ವ್ಯವಸ್ಥೆಗಳು ಹಾಗೂ ಮಹಿಳಾ ಸುರಕ್ಷತೆಗೆ ವಿಶೇಷ ಒತ್ತು ನೀಡಿರುವುದಕ್ಕಾಗಿ ಬೆಂಗಳೂರು ನಗರ ಪೊಲೀಸರನ್ನು ಶ್ಲಾಘಿಸಿದ್ದಾರೆ.
‘ಬೆಂಗಳೂರು ಪೊಲೀಸರು ಹೊಸ ವರ್ಷಾಚರಣೆಗಾಗಿ ಹಲವು ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ವಿಶೇಷಾಗಿ, ಹೆಣ್ಣು ಮಕ್ಕಳ ಸುರಕ್ಷತೆಗಾಗಿ ಸೇಫ್ಟಿ ಐಲ್ಯಾಂಡ್‌ಗಳ ಸ್ಥಾಪನೆ ಹಾಗೂ ನೆರವು ಕೇಂದ್ರಗಳನ್ನು ನಿರ್ಮಿಸಿದ್ದಾರೆ. ನಾವು ಕೂಡ ಬೆಂಗಳೂರು ಪೊಲೀಸರ ಜೊತೆ ಕೈಜೋಡಿಸೋಣ, ನಮ್ಮ ಹೆಣ್ಣು ಮಕ್ಕಳನ್ನು ಗೌರವಿಸೋಣ’ ಎಂದು ಕರೆ ನೀಡಿದ್ದಾರೆ.
‘ಹೊಸ ವರ್ಷವನ್ನು ಯಾವುದೇ ಗಲಾಟೆ ಇಲ್ಲದೆ ಸಂಭ್ರಮಿಸೋಣ. ಯಾವುದೇ ಅನುಚಿತ ವರ್ತನೆಯ ಘಟನೆಗಳು ಕಂಡುಬಂದರೆ, ತಕ್ಷಣ 112 ಪೊಲೀಸ್ ಸಹಾಯವಾಣಿಗೆ ಕರೆ ಮಾಡೋಣ, ಎಲ್ಲರಿಗೂ ಹೊಸ ವರ್ಷದ ಶುಭಾಷಯಗಳು ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.